ಮತಗಳ್ಳತನ ಆರೋಪ, ಆಳಂದ ಕ್ಷೇತ್ರದ ಮಾಜಿ ಶಾಸಕ ಸೇರಿ7 ಜನರ ವಿರುದ್ಧ SIT ಚಾರ್ಜ್‌ಶೀಟ್

ಮತಗಳ್ಳತನ ಆರೋಪ,  ಆಳಂದ ಕ್ಷೇತ್ರದ  ಮಾಜಿ ಶಾಸಕ ಸೇರಿ7 ಜನರ ವಿರುದ್ಧ SIT ಚಾರ್ಜ್‌ಶೀಟ್

2023ರ ವಿಧಾನಸಭೆ ಚುನಾವಣೆ ವೇಳೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಬಿಜೆಪಿಯ ಮಾಜಿ ಶಾಸಕ, ಅವರ ಮಗ ಮತ್ತು ಅವರ ಆಪ್ತ ಸಹಾಯಕ ಸೇರಿದಂತೆ ಏಳು ಜನರನ್ನು ಹೆಸರಿಸಿ ಚಾರ್ಜ್‌ಶೀಟ್ ಸಲ್ಲಿಸಿದೆ. ವಿಶೇಷ ತನಿಖಾ ತಂಡ ಬೆಂಗಳೂರಿನ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಈ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. 5,994 ಮತದಾರರ ಹೆಸರುಗಳನ್ನು ತೆಗೆದುಹಾಕಲು ಮಾಡಿದ ಪ್ರಯತ್ನಗಳಿಗೆ ಸಂಬಂಧಿಸಿದೆ ಈ ಚಾರ್ಜ್‌ಶೀಟ್​ ಸಲ್ಲಿಕೆ ಆಗಿದೆ.

ಇದನ್ನೂ ಓದಿ : ಮುಖವಾಡ ಆಚೆ ಬರಲಿ! – ರಾಶಿಕಾ ಕ್ಯಾಪ್ಟನ್‌ ಆಗ್ತಿದ್ದಂತೆ ಸೂರಜ್‌ ಜೊತೆ ಫೈಟ್!‌

ಸಿಐಡಿ ಮೂಲಗಳ ಪ್ರಕಾರ, ಈ ಚಾರ್ಜ್‌ಶೀಟ್ 22,000ಕ್ಕೂ ಹೆಚ್ಚು ಪುಟಗಳನ್ನು ಹೊಂದಿದ್ದು, ಮತದಾರರ ಹೆಸರುಗಳನ್ನು ಡಿಲೀಟ್​ ಮಾಡಲು ಅಳವಡಿಸಿಕೊಂಡ ವಿಧಾನವನ್ನು ವಿವರಿಸುತ್ತದೆ. ಆರೋಪ ಪಟ್ಟಿಯಲ್ಲಿ ನಾಲ್ಕು ಬಾರಿ ಆಯ್ಕೆ ಆಗಿದ್ದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಮಗ ಹರ್ಷಾನಂದ ಗುತ್ತೇದಾರ್, ಅವರ ಆಪ್ತ ಕಾರ್ಯದರ್ಶಿ ತಿಪ್ಪೇರುದ್ರ, ಕಲಬುರಗಿ ಮೂಲದ ಮೂವರು ಡೇಟಾ ಸೆಂಟರ್ ನಿರ್ವಾಹಕರಾದ ಅಕ್ರಮ್ ಪಾಷಾ, ಮುಕರಾಮ್ ಪಾಷಾ ಮತ್ತು ಮೊಹಮ್ಮದ್ ಅಶ್ಫಾಕ್ ಹಾಗೂ ಪಶ್ಚಿಮ ಬಂಗಾಳದ ಬಾಪಿ ಅದ್ಯಾ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ ಎಂದು ಎಸ್​​ಐಟಿ ಮೂಲಗಳಿಂ ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಆದ್ಯ ಎಂಬುವರನ್ನು ಮೊದಲಿಗೆ ಬಂಧನ ಮಾಡಲಾಗಿತ್ತು. ಈ ಆದ್ಯ ಒಟಿಪಿ ಬೈಪಾಸ್ ಸೌಲಭ್ಯವನ್ನು ಒದಗಿಸಲು ಅಮೆರಿಕ ಮೂಲದ ವೇದಿಕೆಯೊಂದಿಗೆ ಸಂಪರ್ಕ ಹೊಂದಿದ್ದ ಒಟಿಪಿ ಬಜಾರ್ ಎಂಬ ವೆಬ್‌ಸೈಟ್ ಅನ್ನು ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ನಡುವೆ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಕೂಡಾ ಮಾಡಲಾಗಿದೆ. ಸ್​​ಐಟಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ, ಮಾಜಿ ಶಾಸಕರ ಪುತ್ರ ಹರ್ಷಾನಂದ, ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ತಮ್ಮ ತಂದೆಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.

 

Kishor KV