ಹಣ, ಸೈಟ್ ಕೊಡ್ತೀನಿ.. ಬಾರೇ ಬಾ ಚೆಲುವೆ ಅಂತ ಮಹಿಳೆಯನ್ನ ಕರೆದ ಸ್ವಾಮೀಜಿ – ಆಮೇಲೆ ಆಗಿದ್ದೇನು ಗೊತ್ತಾ?

ಈಗ್ ಈಗ ಸ್ವಾಮೀಜಿಗಳು ಮಾಡಬಾರದನ್ನ ಮಾಡ್ತಾ ಇರ್ತಾರೆ. ಕಾವಿಯ ಜೊತೆ ಕಾಮ ಪುರಾಣ ಹೆಚ್ಚಾಗಿದೆ. ಸಾಕಷ್ಟು ಸ್ವಾಮೀಜಿಗಳು ಇದೇ ವಿಚಾರಕ್ಕೆ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕು ಮೆಳೆಕೋಟೆಯಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಈಗ ಗಂಭೀರ ಆರೋಪ ಕೇಳಿ ಬಂದಿದೆ. ಸೈಟ್ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಲ್ಲದೆ, ಅದನ್ನು ವಾಪಸ್ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ದೂರಿದ್ದಾರೆ.
ಇದನ್ನೂ ಓದಿ: ಮೈಸೂರು ಅರಮನೆಯ ಜಯರಾಮ-ಬಲರಾಮ ದ್ವಾರದ ಗೋಡೆಯಲ್ಲಿ ದೊಡ್ಡ ಬಿರುಕು
ಮಹಿಳೆ ಮತ್ತು ಆಕೆಯ ಪತಿ ಸ್ವಾಮೀಜಿ ನಿವಾಸದ ಬಳಿಯೇ ವಾಸವಿದ್ದು, ಪರಿಚಯವಾಗಿತ್ತು ಎನ್ನಲಾಗಿದೆ.ಸ್ವಾಮೀಜಿ ತಮ್ಮ ಪರಿಚಯದವರಿಂದ ಕಡಿಮೆ ಬೆಲೆಗೆ ಸೈಟ್ ಕೊಡಿಸುವ ಭರವಸೆ ನೀಡಿದ್ದರು. 13 ಲಕ್ಷ ರೂ. ಮೌಲ್ಯದ ಸೈಟ್ ಅನ್ನು 12 ಲಕ್ಷಕ್ಕೆ ಕೊಡಿಸುವುದಾಗಿ ಮಾತುಕತೆ ನಡೆಸಿದ್ದರು. ಆದರೆ, ತಮ್ಮ ಬಳಿ 8 ಲಕ್ಷ ರೂ. ಮಾತ್ರ ಇದೆ ಎಂದು ಮಹಿಳೆ ಹೇಳಿದ್ದರು. ಹೀಗಾಗಿ ಉಳಿದ ಹಣಕ್ಕೆ ಸಹಾಯ ಮಾಡುವುದಾಗಿ ಸ್ವಾಮೀಜಿ ಹೇಳಿದ್ದರು ಎಂಬ ಆರೋಪವಿದೆ. ಮಹಿಳೆ ಬಳಿಯಿದ್ದ 8 ಲಕ್ಷ ರೂ.ಗಳಲ್ಲಿ 5 ಲಕ್ಷ ರೂಪಾಯಿಯನ್ನು ಅಡ್ವಾನ್ಸ್ ಆಗಿ ಮತ್ತೊಬ್ಬರಿಗೆ ಸ್ವಾಮೀಜಿ ಕೊಡಿಸಿದ್ದಾರೆ. ಆದರೆ ಒಂದು ವರ್ಷ ಕಳೆದರೂ ಸೈಟ್ ನೀಡದೆ, ಅಡ್ವಾನ್ಸ್ ಹಣವನ್ನೂ ವಾಪಸ್ ನೀಡದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ
ಒಂದು ವರ್ಷವಾದರೂ ಸೈಟ್ ಕೊಡದ ಕಾರಣ ಹಣವನ್ನು ಮಹಿಳೆ ವಾಪಸ್ ಕೇಳಿದ್ದಾರೆಂತೆ. ಆಗ ಸ್ವಾಮೀಜಿ ನೀನು ರೂಂಗೆ ಬಾ ನಿನಗೆ ಹಣ ಕೊಡಿಸುತ್ತೇನೆ ಎಂದಿದ್ದಾರೆ. ನಿನಗೆ ಹಣ ಬೇಕು, ನನಗೆ ಮಜಾ ಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಸ್ವಾಮೀಜಿಯ ಈ ಮಾತುಗಳನ್ನು ಮಹಿಳೆ ಮೊಬೈಲ್ನಲ್ಲಿ ಆಡಿಯೋ ಹಾಗೂ ವಿಡಿಯೋ ರೂಪದಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಆಡಿಯೋ-ವಿಡಿಯೋಗಳನ್ನು ಡಿಲೀಟ್ ಮಾಡುವಂತೆ ಒತ್ತಡ ಹೇರಿದ್ದು, ಅದಕ್ಕಾಗಿ 50 ಸಾವಿರ ರೂ. ನೀಡುವ ಆಮಿಷವನ್ನೂ ಒಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಇನ್ನು ಮಹಿಳೆ ಮತ್ತು ಆಕೆಯ ಕುಟುಂಬದವರು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಬ್ರಹ್ಮಾನಂದ ಸ್ವಾಮೀಜಿ ಪ್ರತಿ ದೂರು ದಾಖಲಿಸಿದ್ದಾರೆ.

ನೋಡಿರಿ

