ಕುಶಿನಗರ ಮಸೀದಿ ಧ್ವಂಸ – ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಸುಪ್ರೀಂ ಕೋರ್ಟ್ ನಿಷೇಧ ಹೇರಿದ ನಂತರವೂ ಮಸೀದಿಯನ್ನು ಧ್ವಂಸಗೊಳಿಸಿದ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದ್ದು, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಕಳುಹಿಸಿದೆ. ಸುಪ್ರೀಂ ಕೋರ್ಟ್ ಆದೇಶದ ಬಳಿಕವೂ ಮಸೀದಿ ಕೆಡವಿದ ಸಿಎಂ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಬಳಿಕವೂ ಅಧಿಕಾರಿಗಳು ಕುಶಿನಗರದಲ್ಲಿ ಬುಲ್ಡೋಜರ್ ಕ್ರಮ ಕೈಗೊಂಡಿದ್ದರ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದೆ.
ಕುಶಿನಗರದಲ್ಲಿ ಬುಲ್ಡೋಜರ್ ಮೂಲಕ ಮಸೀದಿ ಕೆಡವಿದ್ದ ಅಧಿಕಾರಿಗಳು ಸುಪ್ರೀಂ ಕೋರ್ಟ್ ಆದೇಶದ ಬಳಿಕವೂ ಮಸೀದಿಯನ್ನು ಕೆಡವಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ಮಸೀದಿ ಧ್ವಂಸಗೊಳಿಸುವ ಪ್ರಕ್ರಿಯೆ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಕ್ರಮದ ವಿರುದ್ಧ 2024ರ ನವೆಂಬರ್ 13ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.
ಸುಪ್ರೀಂ ಕೋರ್ಟ್ನ ಆ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಮೇಲೆ ಆರೋಪ ಕೇಳಿಬಂದಿದೆ. ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಈ ನೋಟಿಸ್‌ನಲ್ಲಿ ಕುಶಿನಗರದಲ್ಲಿ ಮಸೀದಿಯನ್ನು ಕೆಡವುವ ಮೂಲಕ ಉತ್ತರ ಪ್ರದೇಶ ಸರ್ಕಾರವು 2024ರ ನವೆಂಬರ್ 13ರ ತನ್ನ ಆದೇಶವನ್ನು ಉಲ್ಲಂಘಿಸಿದೆಯೇ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಆ ಆದೇಶದಲ್ಲಿ ಸುಪ್ರೀಂ ಕೋರ್ಟ್ ಪೂರ್ವ ಸೂಚನೆ ಇಲ್ಲದೆ ಮತ್ತು ಇತರ ಪಕ್ಷವನ್ನು ಕೇಳದೆ ಧ್ವಂಸಗೊಳಿಸುವ ಕ್ರಮವನ್ನು ನಿಷೇಧಿಸಿತ್ತು. ಕುಶಿನಗರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಪ್ರಸ್ತುತ ಯಾವುದೇ ಹೆಚ್ಚಿನ ಧ್ವಂಸಗೊಳಿಸುವ ಕ್ರಮವನ್ನು ನಿಷೇಧಿಸಿದೆ.