ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಮತ್ತೆ ಬಂಧನದ ಭೀತಿ! – ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ!

ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಮತ್ತೆ ಬಂಧನದ ಭೀತಿ! – ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್‌ ಶಾಕ್‌ ಕೊಟ್ಟಿದೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ‌ ಪ್ರಕರಣ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಹೀಗಾಗಿ ಡಿಸಿಎಂ ಡಿಕೆಶಿಗೆ ಮತ್ತೆ ಜೈಲು ಭೀತಿ ಶುರುವಾಗಿದೆ.

ಕರ್ನಾಟಕ ಹೈಕೋರ್ಟ್ ಗುರುವಾರ ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಸಹ ಹೈಕೋರ್ಟ್ ತೆರವುಗೊಳಿಸಿದ್ದು, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಡಿಕೆಶಿ ಮತ್ತೆ ಸಿಬಿಐ ತನಿಖೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ ಗೆಲ್ಲಲು ಕಾಂಗ್ರೆಸ್ ಗ್ಯಾರಂಟಿ ಅಸ್ತ್ರ – ಭರವಸೆಗಳು ಅಭಿವೃದ್ಧಿ ಕೆಲಸಗಳಿಗೆ ಮುಳುವಾಗುತ್ತಾ?

ಏನಿದು ಪ್ರಕರಣ?

ಡಿಸಿಎಂ‌ ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ಮೀರಿದ‌ ಆಸ್ತಿ‌ ಗಳಿಕೆಯ ಪ್ರಕರಣ ದಾಖಲಿಸಿಕೊಂಡು‌ ಸಿಬಿಐ ತನಿಖೆ‌ ನಡೆಸುತ್ತಿದೆ. 2017ರ ಆಗಸ್ಟ್ ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ‌ನಿವಾಸ ಸೇರಿದಂತೆ‌ ಸಂಬಂಧಿಕರು ಹಾಗೂ ಆಪ್ತರ ಮನೆಗಳ ಮೇಲೆ ಐಟಿ ದಾಳಿ‌ ನಡೆಸಿತ್ತು. ಆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಹಾಗೂ ಬೆಂಗಳೂರಿನ ಮನೆಗಳಲ್ಲಿ ಕೋಟ್ಯಾಂತರ ರೂಪಾಯಿ ನಗದು ಹಣ ಪತ್ತೆಯಾಗಿತ್ತು.‌ಇದಾದ‌ ನಂತರ ಪ್ರಕರಣ ಇಡಿ ಹಾಗೂ ಸಿಬಿಐ ತನಿಖೆ‌ ಕೈಗೆತ್ತಿಕೊಂಡಿದ್ದವು. ಇಡಿ ವಿಚಾರಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿ‌ ತಿಹಾರ್ ಜೈಲಿಗೆ ಕಳಿಸಲಾಗಿತ್ತು. ಇದರ‌ ನಡುವೆ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದರಿಂದಾಗಿ ಡಿಕೆಶಿಗೆ ಕೆಲ‌ ಕಾಲ‌ ರಿಲೀಫ್ ಸಿಕ್ಕಿತ್ತು. ಆದರೆ ಇದೀಗ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದ್ದು  ಡಿಸಿಎಂಗೆ ಸಂಕಷ್ಟ ಎದುರಾಗಿದೆ.

Shwetha M