ತುಂಗಭದ್ರಾ ಜಲಾಶಯದಿಂದ 64 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಇತಿಹಾಸಿಕ ಸ್ಮಾರಕಗಳು ಮುಳುಗಡೆ ಭೀತಿ

ತುಂಗಭದ್ರಾ ಜಲಾಶಯದಿಂದ 64 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದ್ರಿಂದ ಐತಿಹಾಸಿಕ ಸ್ಮಾರಕಗಳು ಮುಳುಗಡೆ ಭೀತಿ ಎದುರಾಗಿದೆ. ಬಳ್ಳಾರಿಯ ಹೊಸೆಪೇಟೆ ಹೊರವಲಯ ಹಾಗೂ ಕೊಪ್ಪಳದ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ. ಡ್ಯಾಂನ ಸುರಕ್ಷತಾ ದೃಷ್ಟಿಯಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಇದರಿಂದಾಗಿ ಐತಿಹಾಸಿಕ ಸ್ಮಾರಕಗಳು ಮುಳುಗಡೆ ಭೀತಿಯಲ್ಲಿವೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯಿರುವ ವಿಜಯನಗರ ಸಾಮ್ರಾಜ್ಯದ ಸಾಮ್ರಾಟ ಶ್ರೀಕೃಷ್ಣದೇವರಾಯ ಸಮಾಧಿ ಮಂಟಪಕ್ಕೆ ಮುಳುಗಡೆ ಭೀತಿ ಎದುರಾಗಿದೆ. ಇದಲ್ಲದೇ ರೈತರಿಗೂ ಕೂಡ ಸಂಕಷ್ಟ ಎದುರಾಗಿದ್ದು, ಪಂಪ್‌ಸೆಟ್‌ಗಳು ಕೊಚ್ಚಿಹೋಗುತ್ತಿವೆ. ಹೀಗಾಗಿ ಪಂಪ್‌ಸೆಟ್, ಪೈಪ್‌ಗಳನ್ನು ತೆರವುಗೊಳಿಸುವ ಕಲಸ ಮಾಡಲಾಗುತ್ತಿದೆ.
1,633.00 ಅಡಿ ಗರಿಷ್ಟ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 1,625.01 ಅಡಿ ನೀರಿದೆ. ಜಲಾಶಯಕ್ಕೆ 92.6 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, 64 ಸಾವಿರ ಕ್ಯೂಸೆಕ್ ಹೊರಹರಿವಿದೆ.

ನೋಡಿರಿ

