ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ.. ಛತ್ತಿಸ್ ಗಡದಿಂದ 1.5 ಲಕ್ಷ ಟನ್ ಅಕ್ಕಿ ನೀಡಲು ಸಮ್ಮತಿ – ಅನ್ನಭಾಗ್ಯ ಅಕ್ಕಿ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ.. ಛತ್ತಿಸ್ ಗಡದಿಂದ 1.5 ಲಕ್ಷ ಟನ್ ಅಕ್ಕಿ ನೀಡಲು ಸಮ್ಮತಿ – ಅನ್ನಭಾಗ್ಯ ಅಕ್ಕಿ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ 5 ಗ್ಯಾರಂಟಿಗಳ ಜಾರಿಗೆ ಕಸರತ್ತು ನಡೆಸುತ್ತಿದೆ. ಈಗಾಗಲೇ ಶಕ್ತಿ ಯೋಜನೆಯನ್ನ ಅನುಷ್ಠಾನಗೊಳಿಸಿದ್ದು ಮಹಿಳಾ ಪ್ರಯಾಣಿಕರು ಅದರ ಅನುಕೂಲ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಅನ್ನಭಾಗ್ಯ ಯೋಜನೆ ಮೂಲಕ 10 ಕೆಜಿ ಅಕ್ಕಿ ಕೊಡಲು ಮುಂದಾಗಿದ್ದು, ಸಾಕಷ್ಟು ಅಡೆತಡೆಗಳು ಎದುರಾಗುತ್ತಿವೆ. ಅಕ್ಕಿಯೇ ಇಲ್ಲದಾಗಿದ್ದು ಕೇಂದ್ರ ಸರ್ಕಾರ ಕೂಡ ಹೆಚ್ಚುವರಿ ಅಕ್ಕಿ ಕೊಡಲು ನಿರ್ಧಿರಿಸಿದೆ. ಹೀಗಾಗಿ ಸರ್ಕಾರ ನೆರೆ ರಾಜ್ಯಗಳ ನೆರವು ಕೇಳುತ್ತಿದೆ.

ಇದನ್ನೂ ಓದಿ : ಶಾಲೆಯಲ್ಲಿ ನಿರ್ಮಾಣ ಹಂತದ ಗೋಡೆ ಕುಸಿದು ಬಾಲಕ ಸಾವು – ಗೆಳೆಯನ ಕಣ್ಣೆದುರೇ ಹೋಯ್ತು ಪ್ರಾಣ

ಅಕ್ಕಿ ಖರೀದಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ತೆಲಂಗಾಣ ಸಿಎಂ ಜೊತೆ ಮಾತುಕತೆ ನಡೆಸಿದ್ದರು. ಆದರೆ ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ. ಹೀಗಾಗಿ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್​ ಅವರು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಅವರ ಜೊತೆ ನಾನೇ ಮಾತನಾಡಿದ್ದೇನೆ. ಆದರೆ ಅವರು ಅಕ್ಕಿ ದಾಸ್ತಾನು ಇಲ್ಲವೆಂದಿದ್ದಾರೆ. ಹೀಗಾಗಿ ಆಂಧ್ರ ಸರ್ಕಾರದ ಜೊತೆ ಚರ್ಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇನೆ ಎಂದಿದ್ದಾರೆ. ಮತ್ತೊಂದೆಡೆ ಛತ್ತೀಸ್​ಗಢದವರು 1.5 ಲಕ್ಷ ಟನ್ ಅಕ್ಕಿ ಕೊಡಲು ಸಮ್ಮತಿಸಿದ್ದಾರೆ. ಆದರೆ ದರ ಸ್ವಲ್ಪ ದುಬಾರಿ ಆಗುತ್ತಿದೆ ಮತ್ತು ಸಾಗಣೆ ವೆಚ್ಚವೂ ಹೆಚ್ಚಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಮತ್ತೊಮ್ಮೆ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಸಭೆ ಮಾಡಿದ ನಂತರ, ಛತ್ತೀಸ್‌ಘಡದಿಂದ ಅಕ್ಕಿ ಖರೀದಿ ಮಾಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಅನ್ನಭಾಗ್ಯ ಜಾರಿಗೆ ಎದುರಾಗಿರುವ ಅಕ್ಕಿ ಸಮಸ್ಯೆ ನಿವಾರಿಸಲು ರಾಜ್ಯ ಆಹಾರ ಇಲಾಖೆ ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್‌ಘಡ್, ಮಧ್ಯಪ್ರದೇಶ ರಾಜ್ಯಗಳನ್ನ ಸಂಪರ್ಕ ಮಾಡಿದೆ. ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ ದೂರವಾಣಿ ಮೂಲಕ ಅಕ್ಕಿಯ ದರ ಹಾಗೂ ಎಕ್ಸಸ್, ಟ್ರಾನ್ಸ್ ಪೋರ್ಟ್ ಚಾರ್ಜ್ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಅಕ್ಕಿ ಲಭ್ಯತೆಯ ಬಗ್ಗೆ ಆಹಾರ ಇಲಾಖೆ ಸರ್ಕಾರಕ್ಕೆ ಪ್ರಾಥಮಿಕ ಮಾಹಿತಿ ನೀಡಿದೆ. ರಾಜ್ಯದ ಜನತೆಗೆ ಪ್ರತಿ ತಿಂಗಳಿಗೆ ಉಚಿತ ಅಕ್ಕಿ ವಿತರಿಸಲು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಿದೆ.

 

suddiyaana