ಬಿಜೆಪಿ ರಾಜ್ಯಾಧ್ಯಕ್ಷೆ ಪಟ್ಟಕ್ಕೆ ಶೋಭಾ ಕರಂದ್ಲಾಜೆ ಬಹುತೇಕ ಫಿಕ್ಸ್ – ಅಂತಿಮ ಘೋಷಣೆಯೊಂದೇ ಬಾಕಿ!

ಬಿಜೆಪಿ ರಾಜ್ಯಾಧ್ಯಕ್ಷೆ ಪಟ್ಟಕ್ಕೆ ಶೋಭಾ ಕರಂದ್ಲಾಜೆ ಬಹುತೇಕ ಫಿಕ್ಸ್ – ಅಂತಿಮ ಘೋಷಣೆಯೊಂದೇ ಬಾಕಿ!

ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷನಾಯಕನ ಆಯ್ಕೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಮಹತ್ವದ ಬೆಳವಣಿಗೆಗಳ ಮಧ್ಯೆ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ ಎಂಬ ವಿಚಾರ ಪಕ್ಷದ ಒಳಗೆ ಜೋರಾಗಿ ಚರ್ಚೆ ನಡೆಯುತ್ತಿದೆ.

ರಾಜ್ಯ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸುತ್ತಿದ್ದು, ಬಿಜೆಪಿ ಪಾಳಯದಲ್ಲಿ ಸಮರ್ಥ ನಾಯಕನ ಅಗತ್ಯವಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನೂ ಎದುರಿಸಬೇಕು. ಸ್ವಪಕ್ಷೀಯ ಬಣಗಳ ಕಿತ್ತಾಟಕ್ಕೂ ಬ್ರೇಕ್ ಹಾಕಬೇಕು. ಹೀಗಾಗಿ ಮಂಗಳವಾರ ಅಥವಾ ಬುಧವಾರದ ಒಳಗೆ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕಟವಾಗುವ ಸಾಧ್ಯತೆ ಇದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಗೆ ಬಂದಿದೆ. ಹಿಂದುತ್ವ ಫೈರ್ ಬ್ರ್ಯಾಂಡ್, ಮಹಿಳಾ ಮತದಾರರ ಚಿತ್ತ, ಒಕ್ಕಲಿಗ ಅಸ್ತ್ರ ಪ್ರಯೋಗವಾಗಲಿದೆ ಎನ್ನಲಾಗಿದ್ದು, ಒಟ್ಟಿನಲ್ಲಿ ಸಿದ್ದರಾಮಯ್ಯ, ಡಿಕೆಶಿಯನ್ನ ಎದುರಿಸಬಲ್ಲ ಸ್ತ್ರೀಶಕ್ತಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಮೆಗಾ ಪ್ಲಾನ್ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಕಾಂಗ್ರೆಸ್‌ಗೆ ಸೇರ್ಪಡೆ

ದಸರಾ ಮುಗಿಯುವುದರೊಳಗೆ ರಾಜ್ಯ ಬಿಜೆಪಿಗೆ ನೂತನ ಸಾರಥಿ ನೇಮಕವಾಗಲಿದೆ ಎಂದು ಹೇಳಲಾಗುತ್ತಿದೆ. ಆದರಲ್ಲೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಹೆಸರು ಮುನ್ನೆಲೆಯಲ್ಲಿರುವುದು ಅಚ್ಚರಿಕೆ ಕಾರಣವಾಗಿದೆ. ಹೌದು ಬಣ ಬಡಿದಾಟಕ್ಕೆ ಬ್ರೇಕ್​​​​ ಹಾಕಲು ಬಿಜೆಪಿ ಹೈಕಮಾಂಡ್, ಶೋಭಾ ಕರಂದ್ಲಾಜೆ ಅವರಿಗೆ ಮಣೆ ಹಾಕಿದೆ ಎನ್ನಲಾಗುತ್ತಿದೆ. ಇನ್ನು ಈ ಬಗ್ಗೆ ಸ್ವತಃ ಶೋಭಾ ​​ಕರಂದ್ಲಾಜೆ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ. ಇದರೊಂದಿಗೆ ಮಹಿಳೆಯೋರ್ವರು ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯಬಹುದು ಎಂಬ ಮಾತು ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನು ಬಗ್ಗೆ ಸ್ವತಃ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ. ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೆಯ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ. ಮುಂದೆಯೂ ಮೋದಿ ಪ್ರಧಾನಿಯಾಗಬೇಕು ಎನ್ನುವುದು ನನ್ನ ಇಚ್ಛೆ. ಮೋದಿ ಮತ್ತೆ ಪ್ರಧಾನಿ ಆಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.

ಇನ್ನು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಜನ್ಮದಿನ ಶುಭಾಶಯ ಕೋರಿದರು. ಅಲ್ಲದೇ ಇದೇ ವೇಳೆ ರಾಜ್ಯ ರಾಜಕಾರಣಕ್ಕೆ ಬನ್ನಿ ಮೇಡಂ ಎಂದು ಕೋರಿದ್ದಾರೆ. ಹಾಗೇ ರಾಜ್ಯಾಧ್ಯಕ್ಷರ ನೇಮಕ ಬಗ್ಗೆ ಹೇಳಲು ನಾನು ಬಹಳ ಜೂನಿಯರ್. ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ. ನಾನು ಪಕ್ಷಕ್ಕೆ ಬಂದು ಈಗ 10 ವರ್ಷ ಆಗುತ್ತಿದೆ ಅಷ್ಟೇ. ಪಕ್ಷದಲ್ಲಿ ನೇಮಕ ವಿಚಾರದಲ್ಲಿ ನಾನು ಹೇಳಲು ಆಗುವುದಿಲ್ಲ. ಶೋಭಾ ಕರಂದ್ಲಾಜೆ ಅವರನ್ನು ಕಾರ್ಯಕರ್ತರು ರಾಜ್ಯ ರಾಜಕಾರಣಕ್ಕೆ ಕರೆಯುತ್ತಿದ್ದಾರೆ. ನಾನು ಅದೇ ಧಾಟಿಯಲ್ಲೇ ಶುಭಾಶಯ ಕೋರಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

Shantha Kumari