ಭಾರತ – ಚೀನಾ ನಡುವೆ ಗಡಿ ಖ್ಯಾತೆ – ದೆಹಲಿಯಲ್ಲಿ ನಡೆಯುವ ಜಿ–20 ಶೃಂಗಸಭೆಗೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ಗೈರು ಸಾಧ್ಯತೆ

ಭಾರತ – ಚೀನಾ ನಡುವೆ ಗಡಿ ಖ್ಯಾತೆ – ದೆಹಲಿಯಲ್ಲಿ ನಡೆಯುವ ಜಿ–20 ಶೃಂಗಸಭೆಗೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ಗೈರು ಸಾಧ್ಯತೆ

ಅರುಣಾಚಲಪ್ರದೇಶ ಮತ್ತು ಅಕ್ಸಾಯ್‌ ಚಿನ್‌ ಪ್ರದೇಶದ ವಿಚಾರವಾಗಿ ಚೀನಾ ಪದೇ ಪದೇ ಖ್ಯಾತೆ ತೆಗಿಯುತ್ತಿದೆ. ತನ್ನ ಗಡಿಯೊಳಗೆ ಹಾಕಿ ನಕ್ಷೆ ಬಿಡುಗಡೆ ಮಾಡಿದ್ದ ಚೀನಾ ಇದೀಗ ಭಾರತದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ತನ್ನ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೈರಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಮುಂದಿನ ವಾರ ಭಾರತದಲ್ಲಿ ನಡೆಯಲಿರುವ ಜಿ–20 ಶೃಂಗಸಭೆಯಿಂದ ಹೊರಗುಳಿಯುವ ಸಾಧ್ಯತೆ ಇದೆ. ಬೀಜಿಂಗ್ ಪ್ರತಿನಿಧಿಯಾಗಿ  ಲಿ ಕಿಯಾಂಗ್ ಅವರು ಸೆಪ್ಟೆಂಬರ್ 9– 10ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಹೊಸ ನಕ್ಷೆಯನ್ನು ಸಮರ್ಥಿಸಿಕೊಂಡ ಚೀನಾ – ಅತಿರೇಕದ ವ್ಯಾಖ್ಯಾನ ಬೇಡ ಎಂದ ಡ್ರ್ಯಾಗನ್‌ ರಾಷ್ಟ್ರ

ಕ್ಸಿ ಜಿನ್‌ಪಿಂಗ್‌ ಭಾಗವಹಿಸುವಿಕೆಗೆ ಸಂಬಂಧಿಸಿ ಭಾರತ ಮತ್ತು ಚೀನಾದ ವಿದೇಶಾಂಗ ಸಚಿವಾಲಯಗಳ ವಕ್ತಾರರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಶೃಂಗಸಭೆ ಸಂದರ್ಭದಲ್ಲಿಯೇ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರೊಂದಿಗೆ ಜಿನ್‌ಪಿಂಗ್‌ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ, ಜಿನ್‌ಪಿಂಗ್‌ ಅವರು ಶೃಂಗದಲ್ಲಿ ಭಾಗಿಯಾಗುವುದನ್ನು ಖಚಿತಪಡಿಸುವ ಯಾವುದೆ ಮಾಹಿತಿ ಇಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರಿಗೆ ಸೋಮವಾರ ಕರೆ ಮಾಡಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌, ಸಭೆಯಲ್ಲಿ ತಾವು ಪಾಲ್ಗೊಳ್ಳದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು ಕೂಡ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನಲಾಗಿದೆ.

suddiyaana