ರಿಷಬ್ ಮುಂದೆಯೇ ಕಾಂತಾರ ದೈವಕ್ಕೆ ಅವಮಾನ – ಕನ್ನಡಿಗರ ಕ್ಷಮೆ ಕೇಳಿದ ರಣವೀರ್ ಸಿಂಗ್

ರಿಷಬ್ ಮುಂದೆಯೇ ಕಾಂತಾರ ದೈವಕ್ಕೆ ಅವಮಾನ – ಕನ್ನಡಿಗರ ಕ್ಷಮೆ ಕೇಳಿದ ರಣವೀರ್ ಸಿಂಗ್

ರಣವೀರ್ ಸಿಂಗ್ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ದೀಪಿಕಾ ಪಡುಕೋಣೆಯ ಪತಿ ರಣವೀರ್ ಸಿಂಗ್ ಅಕ್ಷರಶಃ ಹುಚ್ಚನಂತೆ ವರ್ತಿಸಿದರು. ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯವನ್ನು ಅನುಕರಣೆ ಮಾಡಿದರು. ಮುಖಭಾವ ತಮ್ಮ ಧ್ವನಿಯ ಮೂಲಕ ದೈವಕ್ಕೆ ಅಪಮಾನ ಮಾಡಿದರು. ರಣ್‌ವೀರ್ ಸಿಂಗ್ ಅವರ ಈ ವರ್ತನೆ ಸಹಜವಾಗಿಯೇ ಹಲವರನ್ನು ಕೆರಳಿಸಿತ್ತು. ಕರುನಾಡಿನೆಲ್ಲೆಡೆ ಮಾತ್ರವಲ್ಲ ದೇಶದ ನಾನಾ ಕಡೆ ರಣ್‌ವೀರ್ ಸಿಂಗ್ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.#ShameOnRanveerSingh ಹ್ಯಾಶ್ ಟ್ಯಾಗ್ ”ಎಕ್ಸ್‌”ನಲ್ಲಿ  ) ಟ್ರೆಂಡ್ ಆಗಿತ್ತು. ರಣವೀರ್ ಸಿಂಗ್ ಮಂಗಳೂರಿನ ಕದ್ರಿ ಮಂಜುನಾಥನ ಸನ್ನಿಧಿಗೆ ಬಂದು ಕ್ಷಮೆ ಕೇಳಬೇಕು. ಈ ತುಳುನಾಡಿನ ಮಣ್ಣಿಗೆ ಶರಣಾಗಬೇಕು ಎಂಬ ಕೂಗು ಕೂಡ ಕೇಳಿ ಬಂದಿತ್ತು. ಈಗ ರಣವೀರ್ ಸಿಂಗ್ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಬೀಡಿ, ಸಿಗರೇಟ್‌ ಬ್ಯಾನ್!‌ – ಊಟ ಬಿಟ್ಟು ಪ್ರತಿಭಟನೆಗಿಳಿದ ಖೈದಿಗಳು!

ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿರುವ ರಣ್‌ವೀರ್ ಸಿಂಗ್. ಕಾಂತಾರ-1 ಸಿನಿಮಾದಲ್ಲಿನ ರಿಷಭ್ ಶೆಟ್ಟಿಯವರ ಅದ್ಭುತವಾದ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಈ ರೀತಿಯಾಗಿ ನಟಿಸಲು ಎಷ್ಟು ಪರಿಶ್ರಮ ಬೇಕಾಗುತ್ತೆ ಎಂಬುವುದು ಓರ್ವ ನಟನಾಗಿ ನನಗೆ ಗೊತ್ತಿದೆ. ರಿಷಭ್ ನಟನೆಗೆ ಮೆಚ್ಚುಗೆ ಸೂಚಿಸಿದ್ದೇನೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ಯಾರ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

Kishor KV