ವರುಣ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್?

ವರುಣ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್?

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ತಮ್ಮ ಕ್ಷೇತ್ರವನ್ನು ಫೈನಲ್ ಮಾಡಿಲ್ಲ. ಕಳೆದ ಬಾರಿ ಸ್ಪರ್ಧಿಸಿ ಗೆದ್ದಿದ್ದ ಬಾದಾಮಿ ಕ್ಷೇತ್ರದಿಂದ ಈ ಬಾರಿ ಮತ್ತೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟವಾಗಿಯೇ ಹೇಳಿದ್ದಾರೆ. ಇನ್ನೂ ಕೂಡಾ ಕ್ಷೇತ್ರ ಹುಡುಕಾಟದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕೋಲಾರದಲ್ಲಿ ಸ್ಪರ್ಧಿಸುತ್ತಾರೆ ಅನ್ನೋ ಮಾತು ಬಲವಾಗಿಯೇ ಕೇಳಿಬಂದಿತ್ತು. ಕೊಲಾರ ಕ್ಷೇತ್ರದಲ್ಲಂತೂ ಸಿದ್ದರಾಮಯ್ಯ ನಿಲ್ಲೋದು ಪಕ್ಕಾ ಅಂತಾನೇ ಹೇಳಲಾಗ್ತಿತ್ತು. ಇದರ ಮಧ್ಯೆಯೇ ರಾಜ್ಯದ ವಿವಿಧ ಕ್ಷೇತ್ರಗಳಿಂದಲೂ ಸಿದ್ದರಾಮಯ್ಯ ಅವರು ಇಲ್ಲೇ ಚುನಾವಣೆಗೆ ನಿಲ್ಲಲಿ ಅನ್ನೋ ಆಫರ್ ಕೂಡಾ ಬರುತ್ತಿದೆ. ಹೀಗಿರುವಾಗಲೇ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲೇ ನಿಲ್ಲಲ್ಲಿದ್ದಾರೆ. ವರುಣ ಕ್ಷೇತ್ರವನ್ನೇ ಫೈನಲ್ ಮಾಡಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ಓದಿ :  ‘ಸಲಾಂ ಆರತಿ’ ಬದಲು ‘ಆರತಿ ನಮಸ್ಕಾರ’ – ದೇವಾಲಯಗಳಲ್ಲಿ ‘ಸಲಾಂ’ಗೆ ಕೊಕ್

ತವರು ಕ್ಷೇತ್ರ ವರುಣ ಸಿದ್ದರಾಮಯ್ಯ ಪಾಲಿಕೆ ಅದೃಷ್ಟ ತಂದಿರುವ ಕ್ಷೇತ್ರ. 2008ರಲ್ಲಿ ವರುಣಾದಿಂದ ಗೆದ್ದು ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, 2013ರಲ್ಲಿ ವರುಣಾದಿಂದ ಗೆದ್ದು ಮುಖ್ಯಮಂತ್ರಿ ಆಗಿದ್ದರು. ಆದರೆ 2018ರಲ್ಲಿ ವರುಣಾವನ್ನು ಮಗ ಯತೀಂದ್ರ ಸಿದ್ದರಾಮಯ್ಯಗೆ ಬಿಟ್ಟುಕೊಟ್ಟಿದ್ದರು. ಸಿದ್ದರಾಮಯ್ಯ ಚಾಮುಂಡಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡರೂ, ಬಾದಾಮಿಯಿಂದ ಶ್ರೀರಾಮುಲು ಎದುರು ಕಡಿಮೆ ಅಂತರದಲ್ಲಿ ಗೆದ್ದಿದ್ದರು. ಸದ್ಯ ಮೈಸೂರು ಜಿಲ್ಲೆ ವರುಣ ಕ್ಷೇತ್ರದಲ್ಲಿ 2 ದಿನಗಳ ಪ್ರವಾಸದಲ್ಲಿದ್ದಾರೆ. ಇಲ್ಲಿ ಸಿದ್ದರಾಮಯ್ಯ ಅವರಿಗೆ ವ್ಯಾಪಕ ಜನ ಬೆಂಬಲ ವ್ಯಕ್ತವಾಗುತ್ತಿದೆ. ಸದ್ಯ ವರುಣ ಕ್ಷೇತ್ರದಿಂದ ಶಾಸಕರಾಗಿರುವ ಯತೀಂದ್ರ ಸಿದ್ದರಾಮಯ್ಯ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಕ್ಷೇತ್ರದ ಜನ ಹೊಗಳುತ್ತಿದ್ದಾರೆ.

ಮಗ ಯತೀಂದ್ರ, ಸಿದ್ದರಾಮಯ್ಯಗೆ ಕ್ಷೇತ್ರ ಬಿಟ್ಟುಕೊಡಲು ಸಿದ್ಧರಿದ್ದಾರೆ. ಇದರ ಜೊತೆಗೆ ವರುಣ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸೇರಿ ಹಲವು ನಾಯಕರು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಖಚಿತ ಅನ್ನೋ ಮಾತು ಕೇಳಿಬರುತ್ತಿದೆ.

suddiyaana