ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ – ಚಿಕ್ಕಬಳ್ಳಾಪುರ ಜಿಲ್ಲೆಗೆ ಬಂಪರ್ ಲಾಟರಿ

ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ – ಚಿಕ್ಕಬಳ್ಳಾಪುರ ಜಿಲ್ಲೆಗೆ ಬಂಪರ್ ಲಾಟರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ  ನಿನ್ನೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ  14ನೇ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ. ಪ್ರತಿಯೊಂದು ಜಿಲ್ಲೆಯಲ್ಲೂ ವಿನೂತನ ಮಾದರಿಯಲ್ಲಿ ಶಾಲೆ ಆರಂಭಿಸಲಿದ್ದೇವೆ. ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಯುಪಿಎಸ್​ಸಿ ಪರೀಕ್ಷೆ ತರಬೇತಿ ನೀಡಲು 10 ಕೋಟಿ ವೆಚ್ಚದಲ್ಲಿ ಬೆಂಗಳೂರಿನಲ್ಲಿ ಎರಡು ವಸತಿ ಶಾಲೆಗಳನ್ನು ತೆರೆಯಲು ನಿರ್ಧಾರ ಮಾಡಲಾಗಿದೆ. ಹೊಸ ತಾಲೂಕುಗಳಲ್ಲಿ ಸಮುದಾಯ ಆರೋಗ್ಯ ಸ್ಥಾಪಿಸಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.

ಡಿಸಿಎಂ  ಡಿ.ಕೆ.ಶಿವಕುಮಾರ್ ಮಾತನಾಡಿ, ಕೋಲಾರದ ಅಮಾನಿಕೆರೆ, ಅಂತರಗಂಗಾ ಬೆಟ್ಟ ಅಭಿವೃದ್ಧಿಗೆ 79 ಕೋಟಿ ರೂ., ಗಂಟ್ಲ ಮಲ್ಲಮ್ಮ ಜಲಾಶಯ ನಿರ್ಮಾಣಕ್ಕೆ 189 ಕೋಟಿ ರೂ., ನಂದಿಗಿರಿಧಾಮ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಅಕ್ರಮ ಗಣಿಗಾರಿಕೆ ಸಂಬಂಧ ತನಿಖೆಗೆ ಹೆಚ್​.ಕೆ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ ಎಂದರು. ಚಿಂತಾಮಣಿಯಲ್ಲಿ ಮೂರಾರ್ಜಿ ದೇಸಾಯಿ ವಸತಿ ಶಾಲೆಗೆ ಅನುಮೋದನೆ ದೊರೆತಿದೆ. ಚಿಕ್ಕಬಳ್ಳಾಪುರದಲ್ಲಿ ಅಂತರ್ ರಾಷ್ಟ್ರೀಯ ಹೂವಿನ ಮಾರುಕಟ್ಟೆಗೆ 141 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು 36 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಬೆಂಗಳೂರು ಉತ್ತರ ವಿವಿ ಎರಡನೇ ಹಂತದಲ್ಲಿ ಕಾಮಗಾರಿಗೆ 123 ಕೋಟಿ ರೂಪಾಯಿ ವೆಚ್ಚದಲ್ಲಿ ಅನುದಾನ ನೀಡಲಾಗುವುದು. ಎಚ್.ಎನ್. ವ್ಯಾಲಿ ಯೋಜನೆ ವಿಸ್ತರಣೆ, ಶಿಡ್ಲಘಟ್ಟದ 45 ಕೆರೆಗಳು ಸೇರಿದಂತೆ ಚಿಂತನೀಯ ಕೆರೆಗಳಿಗೆ ನೀರು ಹರಿಸಲು ಅನುಮೋದನೆ ದೊರೆತಿದೆ ಎಂದು ಹೇಳಿದರು.

Kishor KV