ಸಿದ್ದರಾಮಯ್ಯ ವಿರುದ್ಧ ಸುಧಾಕರ್ ಟ್ವೀಟ್ ಗೆ ಎಂಟಿಬಿ ಗರಂ – ಇಷ್ಟು ದಿನ ಯಾಕೆ ಮೌನವಾಗಿದ್ರೆಂದು ಟಾಂಗ್!

ಸಿದ್ದರಾಮಯ್ಯ ವಿರುದ್ಧ ಸುಧಾಕರ್ ಟ್ವೀಟ್ ಗೆ ಎಂಟಿಬಿ ಗರಂ – ಇಷ್ಟು ದಿನ ಯಾಕೆ ಮೌನವಾಗಿದ್ರೆಂದು ಟಾಂಗ್!

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದ್ರೂ ಸಿಎಂ ಆಯ್ಕೆ ಮಾಡೋದೇ ಸವಾಲಾಗಿದೆ. ರಾಜ್ಯ ರಾಜಕೀಯದ ಬೆಳವಣಿಗೆಗಳು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಈ ನಡುವೆ ಮಾಜಿ ಸಚಿವ ಸುಧಾಕರ್‌ ಸಿದ್ದರಾಮಯ್ಯ ವಿರುದ್ಧ ಸ್ಫೋಟಕ ಆರೋಪ ಮಾಡಿದ್ರು. ಜೆಡಿಎಸ್‌ – ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಉರುಳಲು ಸಿದ್ದರಾಮಯ್ಯ ಪಾತ್ರವೂ ಇದೆ ಎಂದು ಟ್ವಿಟ್ ಮಾಡಿದ್ದರು. ಸುಧಾಕರ್ ಟ್ವೀಟ್ ಗೆ ಮಾಜಿ ಸಚಿವ ಎಂಟಿಬಿ ನಾಗರಾಜ್ ಟಾಂಗ್ ಕೊಟ್ಟಿದ್ದಾರೆ.

ಮಾನ್ಯ ಸಿದ್ದರಾಮಯ್ಯರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ. ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು? ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ರವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ? ಇಷ್ಟು ದಿನ ಮೌನವಾಗಿದ್ದು ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು? ಎಂದು ಟ್ವೀಟ್ ಮೂಲಕ ಪಶ್ನಿಸಿದ್ದಾರೆ.

ಇದನ್ನೂ ಓದಿ : ಸೋತ ಮೇಲೆ ತನ್ನ ಹಣ ವಾಪಸ್ ಕೊಡುವಂತೆ ಜಾಹೀರಾತು – ಕೆಜಿಎಫ್ ಬಾಬು ನಡೆಗೆ ಆಕ್ರೋಶ!

ಇನ್ನು ಬೆಳಗ್ಗೆ ಟ್ವೀಟ್ ಮಾಡಿದ್ದ ಸುಧಾಕರ್, ಸಮ್ಮಿಶ್ರ ಸರ್ಕಾರ ಉರುಳಿಸಿದ್ದರಲ್ಲಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ಆರೋಪಿಸಿ ಮಾಜಿ ಸಚಿವ ಡಾ. ಕೆ. ಸುಧಾಕರ್‌ ಸರಣಿ ಟ್ವೀಟ್‌ ಮಾಡಿದ್ದರು. ‘2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭಾ ಚುನಾವಣೆವರೆಗೂ ಸಹಿಸಿಕೊಳ್ಳಿ. ಲೋಕಸಭಾ ಚುನಾವಣೆ ಮುಗಿದ ಬಳಿಕ ಮೈತ್ರಿ ಸರ್ಕಾರ ಇರಲ್ಲ. ಹೆಚ್​ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಇರಲು ಬಿಡಲ್ಲ ಎಂದು ಹೇಳ್ತಿದ್ದರು. ಸಿದ್ದರಾಮಯ್ಯ ಶಾಸಕರಿಗೆ ಸಮಾಧಾನ ಹೇಳಿ ಕಳುಹಿಸುತ್ತಿದ್ದರು. ಕಾರ್ಯಕರ್ತರು, ಮುಖಂಡರನ್ನು ಉಳಿಸಿಕೊಳ್ಳಲು ರಿಸ್ಕ್ ತೆಗೆದುಕೊಂಡ್ವಿ. ರಾಜೀನಾಮೆ ನೀಡಿ ಮತ್ತೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ಈ ನಡೆಯಲ್ಲಿ ಸಿದ್ದರಾಮಯ್ಯ ಪ್ರೇರಣೆ ಇದೆ. ಇದನ್ನು ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲ ಎನ್ನಲು ಸಾಧ್ಯವೇ? ಎಂದು ಟ್ವೀಟ್​ ಮೂಲಕ ಸಿದ್ದರಾಮಯ್ಯ ವಿರುದ್ಧ ಡಾ.ಸುಧಾಕರ್​ ಆರೋಪ ಮಾಡಿದ್ದರು.

suddiyaana