ಮಾಜಿ ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ – 20 ಕೋಟಿ ರೂಪಾಯಿಗೂ ಅಧಿಕ ನಗದು ವಶ

ಮಾಜಿ ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ – 20 ಕೋಟಿ ರೂಪಾಯಿಗೂ ಅಧಿಕ ನಗದು ವಶ

ನವದೆಹಲಿ:  ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾಜಿ ಅಧಿಕಾರಿ ಮನೆ ಮೇಲೆ ಕೇಂದ್ರೀಯ ತನಿಖಾ ದಳ  ಅಧಿಕಾರಿಗಳು ದಾಳಿ ನಡೆಸಿದ್ದು, 20 ಕೋಟಿ ರೂಪಾಯಿಗೂ ಅಧಿಕ ನಗದನ್ನು  ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ:ಇನ್ಮುಂದೆ ಬೆಳಗ್ಗೆ 7.30ಕ್ಕೆ ಸರ್ಕಾರಿ ಕಚೇರಿಗಳು ಓಪನ್! – ಯಾಕೆ ಇಂತಹ ಬದಲಾವಣೆ?   

ಸಾರ್ವಜನಿಕ ವಲಯದ ನೀರು ಮತ್ತು ವಿದ್ಯುತ್‌ ಸಲಹಾ ಸೇವೆ (ವ್ಯಾಪ್‌ಕಾಸ್‌) ಲಿಮಿಟೆಡ್‌ನ ಮಾಜಿ ಚೇರ್‌ಮನ್‌ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೇಂದರ್ ಕುಮಾರ್ ಗುಪ್ತಾ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ. ಈ ವೇಳೆ ಅವರಿಗೆ ಸೇರಿದ 20 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಇತ್ತೀಚೆಗೆ ಗುಪ್ತಾ ಹಾಗೂ ಅವರ ಕುಟುಂಬಸ್ಥರ ಮೇಲೆ ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು. ಹೀಗಾಗಿ ಸಿಬಿಐ ಅಧಿಕಾರಿಗಳು ವಿವಿಧ ರಾಜ್ಯಗಳಲ್ಲಿ ಅವರಿಗೆ ಸೇರಿದ 19 ಸ್ಥಳಗಳ ಮೇಲೆ ದಾಳಿ ನಡೆಸಿ 20 ಕೋಟಿ ರೂಪಾಯಿಗೂ ಅಧಿಕ ನಗದು ಹಾಗೂ ವಿವಿಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

suddiyaana