ಕೇರಳದಲ್ಲಿ ಆನೆ ದಾಳಿಗೆ ಕರ್ನಾಟಕದಿಂದ ₹15 ಲಕ್ಷ ಪರಿಹಾರ! – ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕೈ ನಾಯಕರು ಹೀಗೆ ಮಾಡಿದ್ರಾ?
ಕೇರಳದ ವಯನಾಡಿನಲ್ಲಿ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿದ್ದರು. ಇದೀಗ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಅಷ್ಟೇ ಅಲ್ಲದೇ ಕರ್ನಾಟಕ ಸರ್ಕಾರ ಮೃತ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ರುಪಾಯಿ ಪರಿಹಾರ ನೀಡಿದೆ. ಇದೀಗ ರಾಜ್ಯ ಬಿಜೆಪಿ ನಾಯಕರು ಸೇರಿ, ರಾಜ್ಯದ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದಾರೆ.
ಇದನ್ನೂ ಓದಿ: ಅಡ್ಜೆಸ್ಟ್ಮೆಂಟ್ ಗಿರಾಕಿ ಇರೋ ತನಕ ನಾನು ಆಗಲ್ಲವೆಂದ ಯತ್ನಾಳ್!
ಏನಿದು ಘಟನೆ?
ಕಳೆದ ಫೆಬ್ರವರಿ 10ರಂದು ಕೇರಳದಲ್ಲಿ ಮನೆಯೊಂದಕ್ಕೆ ಆನೆ ನುಗ್ಗಿತ್ತು, ಬಳಿಕ 47 ವರ್ಷದ ವ್ಯಕ್ತಿಯನ್ನು ತುಳಿದು ಕೊಂದು ಹಾಕಿತ್ತು. ಆ ವ್ಯಕ್ತಿಯನ್ನು ಕೊಂದಿದ್ದ ಆನೆ ಕರ್ನಾಟಕದಿಂದ ಬಂದಿದ್ದೆಂದು ಅಲ್ಲಿನ ಅರಣ್ಯ ಸಚಿವರು ಆರೋಪಿಸಿದ್ದರು. ಈ ಘಟನೆ ರಾಹುಲ್ ಗಾಂಧಿ ಅವರು ಸಂಸತ್ಗೆ ಪ್ರತಿನಿಧಿಸುವ ವಯನಾಡು ಕ್ಷೇತ್ರದಲ್ಲಿ ನಡೆದಿತ್ತು. ಹೀಗಾಗಿ ಭಾರತ್ ಜೋಡೋ ನ್ಯಾಯ ಯಾತ್ರೆಯ ಹಿನ್ನೆಲೆಯ ಉತ್ತರಪ್ರದೇಶದಲ್ಲಿದ್ದ ರಾಹುಲ್ ಗಾಂಧಿ ಅವರು ವಯನಾಡಿಗೆ ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಅಷ್ಟೇ ಅಲ್ಲದೇ ಮೃತ ವ್ಯಕ್ತಿ ಕುಟುಂಬಕ್ಕೆ ಕರ್ನಾಟಕ ಸರ್ಕಾರ 15 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಅಂತಾ ರಾಹುಲ್ ಗಾಂಧಿ ಸೂಚಿಸಿದ್ದರು. ರಾಗಾ ಸೂಚನೆ ಮೇರೆಗೆ ಕರ್ನಾಟಕ ಸರ್ಕಾರ ಮೃತ ಕುಟುಂಬಸ್ಥರಿಗೆ 15 ಲಕ್ಷ ರೂಪಾಯಿ ಘೋಷಣೆ ಮಾಡಿದೆ ಎನ್ನಲಾಗಿದೆ.
ಹೀಗಾಗಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಸಿ.ಟಿ ರವಿ ಅವರು ರಾಹುಲ್ ಗಾಂಧಿ ಮೆಚ್ಚಿಸೋದಕ್ಕೆ ಸರ್ಕಾರ ರಾಜ್ಯದ ಜನರ ಹಣ ದುರ್ಬಳಕೆ ಮಾಡಿಕೊಂಡಿದೆ. ಕೇರಳಲ್ಲಿ ಆನೆ ದಾಳಿಗೆ ಕರ್ನಾಟಕದಿಂದ ಪರಿಹಾರ ಯಾಕೆ ಎಂದು ಪ್ರಶ್ನಿಸಿದ್ದಾರೆ.