ತೆಲಂಗಾಣದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ – 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾ*ವು, 20 ಜನರ ಸ್ಥಿತಿ ಗಂಭೀರ

ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಭೀಕರ ದುರ್ಘಟನೆ ನಡೆದಿದೆ. ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲರಾಮ್ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಅಳಿಯ ನನ್ನ ಮಧ್ಯೆ ಏನಿಲ್ಲ ಏನಿಲ್ಲ ಅಂದೇಬಿಟ್ಟಳು ಅತ್ತೆ – ಸವತಿ ಮತ್ಸರಕ್ಕೆ ಗುರಿಯಾದಳಾ ಮಲತಾಯಿ?
ರಿಯಾಕ್ಟರ್ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಪೊಲೀಸರು ಮಾಹಿತಿ ತಿಳಿಸಿದ್ದಾರೆ. 11 ಅಗ್ನಿ ಶಾಮಕ ವಾಹನಗಳ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಸಿಬ್ಬಂದಿ ಬೆಂಕಿಯನ್ನ ನಂದಿಸೋ ಕೆಲಸವನ್ನ ಮಾಡುತ್ತಿದ್ದಾರೆ.
ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ನೋಡಿರಿ

