ಮಠ, ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ಮೀಸಲು

ಮಠ, ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ಮೀಸಲು

ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿದೆ. ಈ ಬಜೆಟ್‌ನಲ್ಲಿ ಮಠ-ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ರೂ. ಹಣ ಮೀಸಲಿರಿಸಲಾಗಿದೆ. ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 475 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಕಿತ್ತೂರು ಭಾಗದ ಅಭಿವೃದ್ಧಿಗೆ ಕಿತ್ತೂರು ಕರ್ನಾಟಕ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದೂ ಸಿಎಂ ಘೋಷಿಸಿದ್ದಾರೆ.

ಮುಂದಿನ 2 ವರ್ಷಗಳಲ್ಲಿ ರಾಜ್ಯದ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಇನಾಂ ಜಮೀನುಗಳ ವರ್ಷಾಶನವನ್ನು 48,000 ರೂ. ಗಳಿಂದ 60,000 ರೂ. ಗಳಿಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,721 ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

suddiyaana