ಜೂನ್ 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ! – ಕಾರಣವೇನು?
ರಾಜ್ಯದಲ್ಲಿ ಏ. 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿದೆ. ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ. ಲೋಕಸಭಾ ಫಲಿತಾಂಶದಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟ! – ಸಿಎಂ, ಡಿಸಿಎಂ ವಿರುದ್ಧ ಅಸಮಧಾನ ಹೊರಹಾಕಿದ ಪರಮೇಶ್ವರ್
ಜೂನ್ 4 ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಬೆಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ನಡೆಯುವ ಸಮಯದಲ್ಲಿ ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಮಾಡಲಾಗಿದೆ.
ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಗಳು ಹಾಕುವಂತಿಲ್ಲ, ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಸೇರಿದಂತೆ ಒಟ್ಟು ಹನ್ನೆರಡು ಷರತ್ತು ಗಳನ್ನು ಆದೇಶದಲ್ಲಿ ತಿಳಿಸಲಾಗಿದೆ.