ಎಳನೀರು ಕುಡಿದು 15 ಮಂದಿ ಅಸ್ವಸ್ಥ – ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ

ಎಳನೀರು ಕುಡಿದು 15 ಮಂದಿ ಅಸ್ವಸ್ಥ – ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ

ಎಳನೀರು ಕುಡಿದು ಸುಮಾರು 15 ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು ನಗರ ಹೊರವಲಯದ ಅಡ್ಯಾರ್ ನಲ್ಲಿನ ಬೊಂಡಾ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಸೌಜನ್ಯಗೆ ನ್ಯಾಯ ಕೊಡಿಸದ ನಾಯಕರಿಗೆ ಪಾಠ ಕಲಿಸುತ್ತಾ NOTA ಅಭಿಯಾನ?

ಅಡ್ಯಾರ್‍ನಲ್ಲಿರುವ ಎಳನೀರು ಮತ್ತು ಐಸ್ ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಎಳನೀರು ಖರೀದಿಸಿದ್ದರು. ಈ ಎಳನೀರು ಕುಡಿದ ಬಳಿಕ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ. ಸದ್ಯ ಅಸ್ವಸ್ಥಗೊಂಡ ಮೂವರಿಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 12 ಮಂದಿ ಹೊರರೋಗಿಗಳಾಗಿ ಔಷಧಿ ಪಡೆದಿದ್ದಾರೆ. ಘಟನೆ ಬಳಿಕ ಆಸ್ಪತ್ರೆ ಹಾಗೂ ಫ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಳನೀರಿನ ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ. ಅಲ್ಲದೇ ಜನ ಆತಂಕಕ್ಕೆ ಒಳಗಾಗದಂತೆ ಆರೋಗ್ಯಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

Shwetha M