ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ! – ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ

ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ! – ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ 15 ಕ್ಕೂ ಹೆಚ್ಚು ಶಾಲೆಗೆಳಿಗೆ ಬಾಂಬ್‌ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಇ-ಮೇಲ್ ಮೂಲಕ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದು, ಶಾಲೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ. ಬೆಳಗ್ಗೆ 6 ಗಂಟೆಗೆ ಶಾಲೆಯ ಇಮೇಲ್ ಗೆ ಬಸವೇಶ್ವರ ನಗರದಲ್ಲಿ ನ್ಯಾಫಲ್  ಸ್ಕೂಲ್, ವಿದ್ಯಾಶಿಲ್ಪ ಸ್ಕೂಲ್ ಸೇರಿ 7 ಶಾಲೆಗೆ ಬೆದರಿಕೆ ಬಂದಿದೆ. ಮಿಕ್ಕಂತೆ ಸದಾಶಿವನಗರ, ಯಲಹಂಕ ಸೇರಿ ಹಲವು ಕಡೆಗಳಲ್ಲಿರುವ ಶಾಲೆಗೆ ಬೆದರಿಕೆ ಕರೆ ಬಂದಿದೆ. ಯಲಹಂಕದ ಒಂದು ಶಾಲೆಗೂ ಬಾಂಬ್ ಬೆದರಿಕೆ ಹಾಕಲಾಗಿದೆ.

ಇದನ್ನೂ ಓದಿ:ಮಹಿಳಾ ಸುರಕ್ಷತೆಗೆ ಪ್ಯಾನಿಕ್‌ ಬಟನ್‌ – ಬಸ್ ಅಪಘಾತ ತಡೆಗೆ ಅಡಾಸ್ ಮೊರೆ ಹೋದ ಬಿಎಂಟಿಸಿ!

ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಇತ್ತ ಬೆದರಿಕೆ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಶಾಲೆಯ ಬಳಿ ಓಡಿ ಬಂದಿದ್ದಾರೆ. ಮಕ್ಕಳನ್ನು ಶಾಲೆಯಿಂದ ಪೋಷಕರು ಮನೆಗೆ ಕರೆದೊಯ್ಯುತ್ತಿದ್ದಾರೆ.

ಕಳೆದ ವರ್ಷವೂ ಬೆಂಗಳೂರು ನಗರದ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಅಂದು ಕೂಡ ಇ-ಮೇಲ್ ಮಾಡಿರುವ ಆಗಂತುಕರು, ನಿಮ್ಮ ಶಾಲೆಯಲ್ಲಿ ಶಕ್ತಿಶಾಲಿ ಬಾಂಬ್ ಇರಿಸಲಾಗಿದ್ದು. ಎಚ್ಚರಿಕೆ ವಹಿಸುವುದು ನಿಮ್ಮ ಕರ್ತವ್ಯ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಹೇಳಲಾಗಿತ್ತು.

ಮಹದೇವಪುರದ ಗೋಪಾಲನ್ ಇಂಟನ್ರ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‍ನಲ್ಲಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಬೆದರಿಸಿದ್ದರು. ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ದೌಡಾಯಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು.

Shwetha M