18 ಗಂಟೆಗಳ ಕಾರ್ಯಾಚರಣೆ ಯಶಸ್ವಿ – ಸಾವು ಗೆದ್ದು ಬಂದ ಸಾತ್ವಿಕ್‌

18 ಗಂಟೆಗಳ ಕಾರ್ಯಾಚರಣೆ ಯಶಸ್ವಿ – ಸಾವು ಗೆದ್ದು ಬಂದ ಸಾತ್ವಿಕ್‌

ಸಾವಿರಾರು ಜನರ ಪ್ರಾರ್ಥನೆ ಫಲಿಸಿದೆ. ಕೊಳವೆ ಬಾವಿಗೆ ಬಿದ್ದ ಮಗು ಸಾವನ್ನು ಗೆದ್ದು ಬಂದಿದೆ. ಸುಮಾರು 18 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್ ತಂಡವು ಮಗುವನ್ನು ಜೀವಂತವಾಗಿ ಹೊರತೆಗೆದಿದೆ.

ಬುಧವಾರ ಸಂಜೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ 2 ವರ್ಷದ ಮಗು ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿತ್ತು. ಮಗುವಿನ ಚಲನವಲನಗಳ ಬಗ್ಗೆ ಕ್ಯಾಮಾರದಲ್ಲಿ  ಸೆರೆಹಿಡಿಯಲಾಗಿತ್ತು. ಮಗು ಕಾಲು ಅಲ್ಲಾಡಿಸುತ್ತಿರುವುದು ಕ್ಯಾಮರಾದಲ್ಲಿ ದಾಖಲಾಗಿತ್ತು. ಬಳಿಕ ಮಗುವಿಗೆ ಆಕ್ಸಿಜನ್‌ ವ್ಯವಸ್ಥೆ ಕೂಡ ಮಾಡಲಾಗಿತ್ತು.ರಾತ್ರಿಯಿಡಿ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಇದೀಗ ಈ ಕಾರ್ಯಾಚರಣೆ ಯಶಸ್ವಿಯಾಗಿದೆ. 18 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್ ತಂಡವು ಮಗುವನ್ನು ಜೀವಂತವಾಗಿ ಹೊರತೆಗೆದಿದೆ.

ಇದನ್ನೂ ಓದಿ: ಬಿಜೆಪಿಗೆ ವೋಟ್‌ ಹಾಕಿದ್ರೆ ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ರದ್ದಾಗುತ್ತೆ! – ಶಾಸಕ ಪ್ರದೀಪ್ ಈಶ್ವರ್ ಶಾಕಿಂಗ್‌ ಹೇಳಿಕೆ

ಮಗುವನ್ನು ಕೊಳವೆ ಬಾವಿಯಿಂದ ಹೊರ ತೆಗೆದ ಕೂಡಲೇ ವೈದ್ಯರ ತಂಡ  ಮಗುವಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ.  ಬಳಿಕ ಆಂಬುಲೆನ್ಸ್‌ನಲ್ಲಿ ಮಗುವನ್ನು ಇಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ಕೊಳವೆಬಾವಿ ದುರಂತ ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಕರ್ನಾಟಕದಲ್ಲಿ ಒಟ್ಟು 8 ಕೊಳವೆಬಾವಿ ದುರಂತಗಳು ನಡೆದಿದೆ. 2000 ನೇ ಇಸವಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ರಾಯಚೂರು, ವಿಜಯಪುರ ಹಾಗೂ ಬಾಗಲಕೋಟೆ , ದಾವಣಗೆರೆ, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 8 ಪ್ರಕರಣಗಳು ದಾಖಲಾಗಿವೆ. ಆದರೆ ಬದುಕಿ ಬಂದಿದ್ದು ಮಾತ್ರ ಕೇವಲ ಒಂದು ಘಟನೆ, 2008ರಲ್ಲಿ ಬಾಗಲಕೋಟೆ ತಾಲೂಕಿನ ಸಿಕ್ಕೇರಿಯಲ್ಲೂ ಕೊಳವೆಬಾವಿ ದುರಂತದಲ್ಲಿ 20 ವರ್ಷದ ಕಲ್ಲವ್ವ ಎಂಬುವವರು ಬದುಕಿ ಬಂದಿದ್ದರು. ಆಗ ಅವಳಿಗೆ ಬದುಕಿ ಬಂದ ಫ್ರಿನ್ಸ್‌ ಅಂತ ಹೆಸರು ಕೊಡಲಾಗಿತ್ತು. ಇದಾದ ಬಳಿಕ ಬದುಕಿ ಬಂದಿದ್ದು 2 ವರ್ಷದ ಮಗು ಸಾತ್ವಿಕ್ ಮುಜಗೊಂಡ.

Shwetha M