200 ಯೂನಿಟ್ ವಿದ್ಯುತ್‌ ಫ್ರೀ – ವಿದ್ಯುತ್‌ ಉಪಕರಣಗಳಿಗೆ ಫುಲ್‌ ಡಿಮ್ಯಾಂಡ್‌!

200 ಯೂನಿಟ್ ವಿದ್ಯುತ್‌ ಫ್ರೀ – ವಿದ್ಯುತ್‌ ಉಪಕರಣಗಳಿಗೆ ಫುಲ್‌ ಡಿಮ್ಯಾಂಡ್‌!

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರ ಫಲವಾಗಿಯೇ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈಗ ತಾನು ಘೋಷಣೆ ಮಾಡಿದ್ದ 5 ಗ್ಯಾರಂಟಿಗಳನ್ನು ಜಾರಿಗೆ ತರಲು ಮುಂದಾಗಿದೆ. ಹೀಗಾಗಿ ಪಕ್ಷ ನೀಡಿದ್ದ ಗ್ಯಾರಂಟಿಗಳನ್ನು ನಂಬಿ ಮತಹಾಕಿದ ಜನ ಈಗ ಅವುಗಳ ಪ್ರಯೋಜನ ಪಡೆಯಲು ಹಾತೊರೆಯುತ್ತಿದ್ದಾರೆ. ಅದರಲ್ಲೂ ಪ್ರಮುಖವಾಗಿ 200 ಯೂನಿಟ್ ಉಚಿತ ವಿದ್ಯುತ್ ಸದ್ಬಳಕೆಗೆ ಜನ ಮುಂದಾಗಿದ್ದಾರೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕರೆಂಟ್‌ ಬಿಲ್‌ ಕಟ್ಟಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: KSRTC ಗೆ ತಲೆನೋವಾದ ಮಹಿಳೆಯರಿಗೆ ಉಚಿತ ಪ್ರಯಾಣ – ಸಿಎಂಗೆ ಪತ್ರ ಬರೆದ ಸಂಸ್ಥೆ

ಕಾಂಗ್ರೆಸ್‌ 200 ಯೂನಿಟ್ ವಿದ್ಯುತ್ ಫ್ರೀ ನೀಡುವುದಾಗಿ ಘೋಷಣೆ ಮಾಡಿದ್ದ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಜನರು ಆ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ಹಿನ್ನೆಲೆ ವಿದ್ಯುತ್ ಉಪಕರಣಗಳಿಗೆ ಡಿಮ್ಯಾಂಡ್‌ ಶುರುವಾಗಿದೆ. ಜಿಲ್ಲೆಯ ಜನರು ಮನೆಗೆ ಬೇಕಾದ ಫ್ರಿಜ್, ಎಸಿ, ಎಲೆಕ್ಟ್ರಿಕ್ ಒಲೆ, ಫ್ಯಾನ್‌ಗಳ ಖರೀದಿಸುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹಳ್ಳಿ ಮತ್ತು ನಗರ ಪ್ರದೇಶದ ಜನ ಕಳೆದ ತಿಂಗಳಿಗಿಂತ ಈ ತಿಂಗಳು ಅತಿ ಹೆಚ್ಚು ವಿದ್ಯುತ್ ಬಳಕೆ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ. ಕಳೆದ 10 ದಿನಗಳಲ್ಲಿ ಎಲೆಕ್ಟ್ರಿಕ್ ಉತ್ಪನ್ನಗಳ ಖರೀದಿ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಇದು ಹೀಗೆ ಮುಂದುವರಿದರೆ ವಿದ್ಯುತ್‌ ಉಪಕರಣಗಳ ಅಭಾವ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.

ಪ್ರತಿ ಮನೆಗಳಲ್ಲಿ ತಿಂಗಳಿಗೆ ಅಂದಾಜು 35 ರಿಂದ 50 ಯೂನಿಟ್ ಒಳಗೆ ವಿದ್ಯುತ್ ಉಪಯೋಗವಾಗುತ್ತದೆ. ಆದರೆ ಕಾಂಗ್ರೆಸ್ ಪಕ್ಷ 200 ಯೂನಿಟ್‌ಗಳ ಉಚಿತ ವಿದ್ಯುತ್ ಘೋಷಣೆ ಮಾಡಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಲು ಜನ ಮುಂದಾಗಿದ್ದಾರೆ. ಹೀಗಾಗಿ ಜನರು ಒಂದು ಕಡೆ ಕರೆಂಟ್‌ ಬಿಲ್‌ ಕಟ್ಟಲ್ಲ ಎಂದು ಪಟ್ಟು ಹಿಡಿದಿದ್ದರೆ, ಇನ್ನೊಂದೆಡೆ ವಿದ್ಯುತ್ ಬಳಕೆ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ.

suddiyaana