ಬಡಕುಟುಂಬಕ್ಕೆ ತಿಂಗಳಿಗೆ 2 ಸಾವಿರ ರೂಪಾಯಿ – ರಾಜ್ಯಸರ್ಕಾರದ ನಿರ್ಧಾರ

ಬಡಕುಟುಂಬಕ್ಕೆ ತಿಂಗಳಿಗೆ 2 ಸಾವಿರ ರೂಪಾಯಿ – ರಾಜ್ಯಸರ್ಕಾರದ ನಿರ್ಧಾರ

ಬೆಂಗಳೂರು:  ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಕ್ಕೆ ಪ್ರತಿ ತಿಂಗಳು 2,000 ರೂಪಾಯಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಂಬರುವ ಬಜೆಟ್‌ನಲ್ಲಿಯೇ ಈ ನಿರ್ಧಾರ ಪ್ರಕಟಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಕ್ಕೆ ಮಾಸಿಕ 2 ಸಾವಿರ ರೂಪಾಯಿಯನ್ನ ಸರ್ಕಾರ ನೀಡಲಿದೆ. ಮೊನ್ನೆ ಬೆಂಗಳೂರಿನಲ್ಲಿ ನಡೆದ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ. ನೀಡಲಾಗುತ್ತದೆ ಎಂದು ಹೇಳಿದ್ದರು. ಈಗ ಸರ್ಕಾರ ಕೂಡಾ ಕಾಂಗ್ರೆಸ್ ಗೆ ತಿರುಗೇಟು ನೀಡಲು ಈ ನಿರ್ಧಾರ ಕೈಗೊಂಡಿದೆ ಎನ್ನಲಾಗ್ತಿದೆ.

ಇದನ್ನೂ ಓದಿ:  ಮುಂದಿನ ದಶಕ ‘ನೀರಾವರಿ ದಶಕ’ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವುದಾಗಿ ಹೇಳಿದೆ. ಇದು ಜುಲೈ ತಿಂಗಳಿನಿಂದ ಅನ್ವಯವಾಗಲಿದೆ. ಆದರೆ, ಈಗಿನಿಂದಲೇ ಈ ಯೋಜನೆಯನ್ನು ನಾವು ಆರಂಭಿಸಲಿದ್ದೇವೆ’ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದು ಇದೇ ವೇಳೆ ಕಂದಾಯ ಸಚಿವರು ತಿಳಿಸಿದ್ದಾರೆ.

suddiyaana