ಇರಾನ್‌ – ಇಸ್ರೇಲ್‌ ಯುದ್ದ ಎಫೆಕ್ಟ್!‌  – ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು

ಇರಾನ್‌ – ಇಸ್ರೇಲ್‌ ಯುದ್ದ ಎಫೆಕ್ಟ್!‌  – ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು

ಇರಾನ್‌-ಇಸ್ರೇಲ್‌ ಯುದ್ಧ ನಿಲ್ಲುವಂತೆ ಕಾಣುತ್ತಿಲ್ಲ. ಕ್ಷಣ ಕ್ಷಣಕ್ಕೂ ಯುದ್ಧ ತೀವ್ರಗೊಳ್ಳುತ್ತಿದೆ. ಯುದ್ಧದ ಹಿನ್ನೆಲೆ ಮಧ್ಯಪ್ರಾಚ್ಯದ ಏರ್‌ಸ್ಪೇಸ್‌ಗೆ ನಿರ್ಬಂಧ ವಿಧಿಸಲಾಗಿದೆ. ಪರಿಣಾಮವಾಗಿ ಬೆಂಗಳೂರಿಗೆ ಆಗಮಿಸಬೇಕಿದ್ದ 9 ಮತ್ತು ನಿರ್ಗಮಿಸಬೇಕಿದ್ದ 10 ವಿಮಾನಗಳ ಹಾರಾಟ ರದ್ದಾಗಿದೆ.

ಇದನ್ನೂ ಓದಿ: ಅಯ್ಯಯ್ಯೋ.. ಮೈ ಸುಡೋ ಬಿಸಿಲು – ಏಪ್ರಿಲ್, ಮೇ ನಲ್ಲೂ ರಾಜ್ಯದಲ್ಲಿ ತಾಪಾಮಾನ ಏರಿಕೆ

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲ ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ.

ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಒಟ್ಟು 21 ವಿಮಾನಗಳ ಹಾರಾಟ ರದ್ದಾದ ಕಾರಣ, ಪ್ರಯಾಣಿಕರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ವಿಮಾನ ರದ್ದಾದ ಬಗ್ಗೆ ಸಂಬಂಧಿತ ಏರ್‌ಲೈನ್ ಸಂಸ್ಥೆಗಳು ಪ್ರಯಾಣಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.

ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವುದರಿಂದ ಮುಂದಿನ ದಿನಗಳಲ್ಲಿಯೂ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಧ್ಯಪ್ರಾಚ್ಯ ದೇಶಗಳತ್ತ ಪ್ರಯಾಣಿಸುವವರು ತಮ್ಮ ವಿಮಾನಗಳ ಸ್ಥಿತಿಯನ್ನು ಮುಂಚಿತವಾಗಿ ಪರಿಶೀಲಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

Shwetha M

Leave a Reply

Your email address will not be published. Required fields are marked *