ಸಿಕ್ಕಿಂನಲ್ಲಿ ಮೇಘಸ್ಫೋಟ -ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ

ಸಿಕ್ಕಿಂನಲ್ಲಿ ಮೇಘಸ್ಫೋಟ -ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ

ಉತ್ತರ ಸಿಕ್ಕಿಂನಲ್ಲಿ ಮೇಘಸ್ಪೋಟ ಸಂಭವಿಸಿದ್ದು, ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಇದರಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ವರಿದಿಯಾಗಿದೆ.

ಉತ್ತರ ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟ ಸಂಭವಿಸಿದೆ. ಇದರಿಂದಾಗಿ ಪ್ರವಾಹ, ಪ್ರವಾಹ ಸಂಭವಿಸಿದ್ದು, 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ, ಪ್ರವಾಹದ ನಂತರ ಚುಂಗ್‌ಥಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೆಳಭಾಗದ ಪ್ರದೇಶಗಳಲ್ಲಿ ನೀರಿನ ಮಟ್ಟ ಇದ್ದಕ್ಕಿದ್ದಂತೆ 15-20 ಅಡಿ ಎತ್ತರಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನಲ್ಲಿ ನೀರಿನ ಮಟ್ಟ ಹೆಚ್ಚಳ -100 ಅಡಿಯ ಗಡಿ ದಾಟಿದ ನೀರಿನ ಮಟ್ಟ

ಸಿಂಘ್‌ಥಾಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಮುಳುಗಿವೆ. ನದಿ ಉಕ್ಕಿ ಹರಿಯುತ್ತಿರುವ ಕಾರಣ ತೀಸ್ತಾ ನದಿಯ ಮೇಲಿನ ಸಿಂಥಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಕೆಳಗಿನ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುತ್ತಿದೆ. ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ. ತೀಸ್ತಾ ನದಿಯಿಂದ ದೂರ ಇರುವಂತೆ ಜನರಿಗೆ ತಿಳಿಸಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Shwetha M