ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ – ನೀರಿನಲ್ಲಿ ಕೊಚ್ಚಿ ಹೋದ 23 ಜನ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟವಾಗಿದ್ದು, ಸಾಕಷ್ಟು ಸಾವು ನೋವು ಸಂಭವಿಸಿದೆ. ಭಾರೀ ಮಳೆಯಿಂದ ದಿಢೀರ್ ಪ್ರವಾಹ ಉಂಟಾಗಿ ಇಬ್ಬರು ಮೃತಪಟ್ಟು, 23 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ವರದಿಯಾಗಿದೆ.
ಇಂದಿರಾ ಪ್ರಿಯದರ್ಶಿನಿ ಜಲವಿದ್ಯುತ್ ಯೋಜನಾ ಸ್ಥಳದ ಬಳಿಯ ಕಾರ್ಮಿಕ ಕಾಲೋನಿಯಲ್ಲಿ ನೆಲೆಸಿದ್ದ ಸುಮಾರು 15-20 ಕಾರ್ಮಿಕರು ಖಾನಿಯಾರ ಮನುನಿ ಖಾದ್‌ನಲ್ಲಿ ದಿಢೀರ್ ನೀರಿನ ಮಟ್ಟ ಏರಿಕೆಯಾಗಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಮಳೆಯಿಂದಾಗಿ ತಾತ್ಕಾಲಿಕವಾಗಿ ಕೆಲಸ ಸ್ಥಗಿತಗೊಳಿಸಲಾಗಿದ್ದ ಪ್ರಾಜೆಕ್ಟ್ ಸ್ಥಳದ ಬಳಿಯ ತಾತ್ಕಾಲಿಕ ಆಶ್ರಯಗಳಲ್ಲಿ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಿದ್ದಾಗ, ಮನುನಿ ಖಾದ್ ಮತ್ತು ಹತ್ತಿರದ ಚರಂಡಿಗಳಿಂದ ಪ್ರವಾಹದ ನೀರು ನೀರು ನುಗ್ಗಿ ಕೊಚ್ಚಿ ಹೋಗಿದ್ದಾರೆ.
ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ, ಸ್ಥಳೀಯ ಆಡಳಿತ, ಗ್ರಾಮ ಪಂಚಾಯತ್ ಮತ್ತು ಕಂದಾಯ ಇಲಾಖೆಯ ತಂಡಗಳು ಸ್ಥಳಕ್ಕೆ ತಲುಪಿವೆ. ಈ ಮಧ್ಯೆ, ಕುಲ್ಲು ಜಿಲ್ಲೆಯಲ್ಲಿ ಅನೇಕ ಮೇಘಸ್ಫೋಟಗಳು ದಿಢೀರ್ ಪ್ರವಾಹಕ್ಕೆ ಕಾರಣವಾಗಿ, ಮನೆಗಳು, ರಸ್ತೆಗಳು, ಶಾಲಾ ಕಟ್ಟಡಗಳು ಮತ್ತು ಸಣ್ಣ ಸೇತುವೆಗಳಿಗೆ ವ್ಯಾಪಕ ಹಾನಿಯುಂಟಾಗಿ ಮೂವರು ಕೊಚ್ಚಿ ಹೋಗಿದ್ದಾರೆ.

ನೋಡಿರಿ

