ಪಾಸ್ ಪೋರ್ಟ್ ಹಗರಣಕ್ಕೆ ಸಂಬಂಧಿಸಿದಂತೆ 50 ಕ್ಕೂ ಹೆಚ್ಚುಕಡೆಗಳಲ್ಲಿ ದಾಳಿ – 24 ಅಧಿಕಾರಿಗಳ ಬಂಧನ
ಪಶ್ಚಿಮ ಬಂಗಾಳ: ಪಾಸ್‌ಪೋರ್ಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ.ಬಂಗಾಳ, ಸಿಕ್ಕಿಂನ ಗ್ಯಾಂಗ್‌ಟಾಕ್ 50 ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿನಡೆಸಿರುವ ಅಧಿಕಾರಿಗಳು ಸುಮಾರು 24 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ.
ಹಣಕ್ಕೆ ಆಸೆಪಟ್ಟು ಈ ಅಧಿಕಾರಿಗಳು ಮತ್ತು ವ್ಯಕ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೆಲವರಿಗೆ ಪಾಸ್‌ಪೋರ್ಟ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು 50ಕ್ಕೂ ಹೆಚ್ಚುಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಈ ಕಾರಣಕ್ಕೆ 16 ಸರ್ಕಾರಿ ಅಧಿಕಾರಿಗಳು ಸೇರಿದಂತೆ 24 ಮಂದಿಯನ್ನು ಬಂಧಿಸಲಾಗಿದೆ. ಗ್ಯಾಂಗ್‌ಟಾಕ್‌ನಲ್ಲಿ ನಿಯೋಜಿಸಲಾದ ಅಧಿಕಾರಿ ಮತ್ತು ಮಧ್ಯವರ್ತಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಮಣಿಪುರದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ – ಇಂಫಾಲ್ನಲ್ಲಿ ಕಟ್ಟೆಚ್ಚರ, ಹಂದಿ ಮಾಂಸ ಬೆಲೆ ಭಾರಿ ಇಳಿಕೆ
ಇದೀಗ ಸಿಬಿಐ ಕೋಲ್ಕತ್ತಾ, ಸಿಲಿಗುರಿ, ಗ್ಯಾಂಗ್ಟಾಕ್ ಮತ್ತು ಇತರ ಸ್ಥಳಗಳಲ್ಲಿ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ. ಈ 24 ಮಂದಿಯ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.
ಇದಕ್ಕೂ ಮುನ್ನ 2002ರಲ್ಲಿ ಇಬ್ಬರು ಸೌದಿ ಅರೇಬಿಯಾದ ರಾಯಭಾರಿ ಕಚೇರಿಯ ನಕಲಿ ಪಾಸ್‌ಪೋರ್ಟ್‌ಗಳು, ವೀಸಾ ಸ್ಟಿಕ್ಕರ್‌ಗಳು ಮತ್ತು ರಬ್ಬರ್ ಸ್ಟ್ಯಾಂಪ್‌ಗಳನ್ನು ಹೊಂದಿದ್ದರು ಎಂಬ ಆರೋಪದ ಮೇಲೆ ಬಂಧಿಸಲಾಗಿತ್ತು. ಆದರೆ ಇದೀಗ ಅವರನ್ನು ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ. ದೇಶದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಜೀತ್ ನಾರಾಯಣ್ ಅವರು ಆರೋಪಿಗಳಾಗಿದ್ದ ಸುಲೇಮಾನ್ ಖಾನ್ ಮತ್ತು ಹಸಿಬುಲ್ ರೆಹಮಾನ್ ವಿರುದ್ಧ 2002ರಲ್ಲಿ ಫಾರ್ಷ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ.