ಕೋಮುಗಲಭೆಯಿಂದ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ

ಕೋಮುಗಲಭೆಯಿಂದ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ

ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಕೋಮು ಗಲಭೆಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ ಪರಿಹಾರದ ಚೆಕ್‌ನ್ನು ನೀಡುವ ವೇಳೆ ಸಿಎಂ ಸಿದ್ದರಾಮಯ್ಯ ಈ ಮಾತನ್ನು ಹೇಳಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ ಕೋಮ ಗಲಭೆಯಲ್ಲಿ ಸಾವನ್ನಪಿದ್ದವರಿಗೆ 25 ಲಕ್ಷ ರೂಪಾಯಿ ಕೊಟ್ಟಿದ್ದರು. ಕೇವಲ ಹಿಂದುಗಳಿಗೆ ಮಾತ್ರ 25 ಲಕ್ಷ ಕೊಟ್ಟಿದ್ದಾರೆ. ಮುಸ್ಲಿಂನವರು ಸಾವನ್ನಪಿದ್ದರೂ ಅವರಿಗೆ ಪರಿಹಾರ ಕೊಟ್ಟಿರಲಿಲ್ಲ. ಸರ್ಕಾರ ಎಲ್ಲರನ್ನೂ ಸಮನಾವಾಗಿ ನೋಡಬೇಕು ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಇಂದೂ ವಿಘ್ನ! – ವೆಬ್‌ಸೈಟ್‌ ನಲ್ಲಿ ತಾಂತ್ರಿಕ ದೋಷ  

ಪ್ರವೀಣ್ ನೆಟ್ಟಾರು, ಹರ್ಷ ಅವರಿಗೆ ಮಾತ್ರ ಪರಿಹಾರ ನೀಡಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಸೂದ್, ಪ್ರವೀಣ್, ಫಾಸೀಲ್, ಅಬ್ದುಲ್ ಜಲಿಲ್, ದೀಪಕ್ ರಾವ್ ಗೆ ಪರಿಹಾರವನ್ನು ಕೊಡಬೇಕಿತ್ತು. ಆದರೆ, ಇಬ್ಬರಿಗೆ ಮಾತ್ರ ಕೊಟ್ಟು ನಾಲ್ವರಿಗೆ ಕೊಡಲಿಲ್ಲ. ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ  ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. BJP ಸರ್ಕಾರದ ಅವಧಿಯಲ್ಲಿ ಕೋಮುಗಲಭೆಗಳಿಗೆ ಬಲಿಯಾದ ಆರು ಯುವಕರ ಪರವಾಗಿ ಇಂದು ಅವರ ಕುಟುಂಬ ವರ್ಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪರಿಹಾರದ ಚೆಕ್ ಗಳನ್ನು ಸ್ವೀಕರಿಸಿದರು.

suddiyaana