ಬೆಳಗಾವಿ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿಒಂದೇ ದಿನ 20 ಕೃಷ್ಣ ಮೃಗಗಳು ಸಾ*ವು

ಬೆಳಗಾವಿ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿಒಂದೇ ದಿನ 20 ಕೃಷ್ಣ ಮೃಗಗಳು  ಸಾ*ವು

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕೃಷ್ಣ ಮೃಗಗಳು  ಸಾವನ್ನಪ್ಪುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೇವಲ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣ ಮೃಗಗಳು ಮೃತಪಟ್ಟಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮತ್ತು ಗೊಂದಲ ಹೆಚ್ಚಾಗಿದೆ. ನವೆಂಬರ್ 13 ರಂದು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳ ಸಾವು ಸಂಭವಿಸಿತ್ತು. ಆದರೆ, ಇಂದು ಒಂದೇ ದಿನ 20 ಕೃಷ್ಣ ಮೃಗಗಳು ಸಾವನ್ನಪ್ಪಿರುವುದು ಅಧಿಕಾರಿಗಳನ್ನು ಬೆಚ್ಚಿಬೀಳಿಸಿದೆ. ಏಕಾಏಕಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆಯೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ.

Kishor KV