ಸೇನಾ ವಾಹನ ಭೀಕರ ಅಪಘಾತ – 13 ಮಂದಿ ಯೋಧರು ಹುತಾತ್ಮ
ಗ್ಯಾಂಗ್ಟಾಕ್: ಈಶಾನ್ಯ ರಾಜ್ಯ ಸಿಕ್ಕಿಂನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 13 ಮಂದಿ ಯೋಧರು ಮೃತಪಟ್ಟಿದ್ದಾರೆ.
ಶುಕ್ರವಾರ ಮುಂಜಾನೆ ಸಿಕ್ಕಿಂ ಚಟ್ಟೆನ್ನಿಂದ ತಾಂಗು ಕಡೆಗೆ ಮೂರು ಸೇನಾ ವಾಹನಗಳು ಹೊರಟಿತ್ತು. ಈ ವೇಳೆ ಜೇಮಾ ಎಂಬಲ್ಲಿ ಕಡಿದಾದ ಮಾರ್ಗದಲ್ಲಿ ಸೇನಾ ವಾಹನ ಸ್ಕಿಡ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ವೇಳೆ 13 ಮಂದಿ ಯೋಧರು ಮೃತಪಟ್ಟಿದ್ದು, ನಾಲ್ವರು ಯೋಧರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಸುಶಾಂತ್ ಸಿಂಗ್ ಗೆಳತಿಗೆ ಪ್ರಭಾವಿ ರಾಜಕಾರಣಿಯಿಂದ 44 ಬಾರಿ ಕರೆ? – ಬಾಲಿವುಡ್ ನಟನ ಸಾವಿಗೆ ರಾಜಕೀಯದ ನಂಟು?
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹುತಾತ್ಮ ಯೋಧರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. “ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ಭಾರತೀಯ ಸೇನೆಯ ಸಿಬ್ಬಂದಿಯ ಪ್ರಾಣಹಾನಿಯಿಂದ ತೀವ್ರ ನೋವಾಗಿದೆ. ಅವರ ಸೇವೆ ಮತ್ತು ಬದ್ಧತೆಗೆ ರಾಷ್ಟ್ರವು ಆಳವಾಗಿ ಕೃತಜ್ಞವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.