ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ – 50 ದಿನಗಳಲ್ಲಿ 30 ಕೋ. ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ.. 700 ಕೋ. ಟಿಕೆಟ್‌ ಮೊತ್ತ!

ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ – 50 ದಿನಗಳಲ್ಲಿ 30 ಕೋ. ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ.. 700 ಕೋ. ಟಿಕೆಟ್‌ ಮೊತ್ತ!

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಘೋಷಿಸಿರುವ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯೂ ಒಂದು. ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದು 50 ದಿನಗಳೇ ಕಳೆದಿದೆ. ಶಕ್ತಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು 50 ದಿನಗಳಲ್ಲಿ ಬರೋಬ್ಬರಿ 30 ಕೋಟಿ ಮಹಿಳೆಯುರ ಪ್ರಯಾಣ ಮಾಡಿದ್ದಾರೆ.

ಜೂನ್‌ 11 ರಿಂದ ಜುಲೈ 31ವರೆಗೆ ಶಕ್ತಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಬರೋಬ್ಬರಿ 30 ಕೋಟಿ ಮಹಿಳೆಯರು ಬಸ್‌ಗಳಲ್ಲಿಉಚಿತವಾಗಿ ಪ್ರಯಾಣಿಸಿದ್ದಾರೆ. ಒಟ್ಟಾರೆ 700 ಕೋಟಿ ಟಿಕೆಟ್‌ ಮೊತ್ತವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೆಯಲ್ಲಿ ಬೈಕ್, ಆಟೋ ನಿಷೇಧ – ಮೊದಲ ದಿನವೇ 100ಕ್ಕೂ ಹೆಚ್ಚು ವಾಹನ ಸವಾರರ ಮೇಲೆ ಕೇಸ್

ಸಾರಿಗೆ ಸಂಸ್ಥೆಗಳ ಬಸ್‌ಗಳು ದಿನದಲ್ಲಿ 1.56 ಲಕ್ಷ ಟ್ರಿಪ್‌ ಸಂಚರಿಸುತ್ತಿವೆ. ರಾಜ್ಯದಲ್ಲಿ ಶಕ್ತಿ ಯೋಜನೆ ಅನುಷ್ಠಾನಕ್ಕೆ ಬರೋ ಮುನ್ನ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಪ್ರತಿನಿತ್ಯ 75 ಲಕ್ಷ ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಈ ಯೋಜನೆ ಜಾರಿಯಾದ ಮೇಲೆ ಪ್ರತಿನಿತ್ಯ ಬರೋಬ್ಬರಿ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಮೇ ತಿಂಗಳಲ್ಲಿಸಾರಿಗೆ ಸಂಸ್ಥೆಗಳ ಒಟ್ಟಾರೆ ಆದಾಯ 354 ಕೋಟಿ ರೂ. ಇತ್ತು. ಯೋಜನೆ ಆರಂಭವಾದ ನಂತರ ಜೂನ್‌ನಲ್ಲಿ377 ಕೋಟಿ ರೂ. ಮತ್ತು ಜುಲೈ ತಿಂಗಳಲ್ಲಿ388 ಕೋಟಿ ರೂ. ಆದಾಯ ಬಂದಿದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಇತ್ತೀಚೆಗೆ ಕೇಂದ್ರ ಸರಕಾರ ರಾಷ್ಟ್ರ ಮಟ್ಟದ ಅತ್ಯುತ್ತಮ 10 ಸಾರಿಗೆ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿಕೆಎಸ್‌ಆರ್‌ಟಿಸಿ ಮೊದಲ ಸ್ಥಾನದಲ್ಲಿದೆ. ಸದ್ಯದಲ್ಲೇ 13 ಸಾವಿರ ಚಾಲಕರು ಹಾಗೂ ನಿರ್ವಾಹಕರನ್ನು ನೇಮಕ ಮಾಡಿಕೊಳ್ಳುತ್ತೇವೆ. ಸಿಬ್ಬಂದಿಯ ಮಕ್ಕಳಿಗೆ ಸಾರಿಗೆ ವಿದ್ಯಾ ಚೇತನ ಯೋಜನೆಯಡಿ ಕೊಡುವ ವಿದ್ಯಾರ್ಥಿವೇತನವನ್ನು ಶೇ 10ರಷ್ಟು ಹೆಚ್ಚಳ ಮಾಡಿದ್ದೇವೆ. 528 ಹಳೆಯ ಬಸ್‌ಗಳನ್ನು ಪುನಶ್ಚೇತನಗೊಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

suddiyaana