ದಳಪತಿ ವಿಜಯ್ ರ್ಯಾಲಿಯಲ್ಲಿ ಮತ್ತೊಂದು ಅವಘಡ! – ಓರ್ವ ಸಾವು, ಹಲವರು ಅಸ್ವಸ್ಥ

ಕರೂರು ದುರಂತದಲ್ಲಿ 41 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ದುರಂತ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ತಮಿಳುನಾಡಿನ ಸೇಲಂನಲ್ಲಿ ನಡೆದ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಬೃಹತ್ ಸಮಾವೇಶದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಹಲವರು ಅಸ್ವಸ್ಥರಾಗಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಫೆಬ್ರವರಿ 15 ರಂದು ಮಾಂಸ ಮಾರಾಟ, ವಧೆ ನಿಷೇಧ
ಮುಖ್ಯಸ್ಥ ವಿಜಯ್ ಅವರು ಸೇಲಂನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದರು. ತಮ್ಮ ನೆಚ್ಚಿನ ನಟ ಹಾಗೂ ನಾಯಕನ ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸೇರಿದ್ದರು. ಮಧ್ಯಾಹ್ನದ ವೇಳೆ ಬಿಸಿಲಿನ ತಾಪಮಾನ ಏರಿಕೆಯಾಗಿದ್ದರಿಂದ ಮತ್ತು ವಿಪರೀತ ಜನಸಂದಣಿಯಿಂದಾಗಿ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ. ಇದ್ರಿಂದಾಗಿ ವ್ಯಕ್ತಿಯೊಬ್ಬರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದಾರಿಯಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಮೃತ ವ್ಯಕ್ತಿಯ ದೇಹ ನಿರ್ಜಲೀಕರಣಕ್ಕೆ ಒಳಗಾಗಿತ್ತು. ಇದೇ ಅವರ ಸಾವಿಗೆ ಕಾರಣವಾಗಿದೆ. ಮೃತ ವ್ಯಕ್ತಿ ಹೃದಯ ಸಂಬಂಧಿ ಕಾಯಿಲೆಗಳಿಂದ ಕೂಡ ಬಳಲುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗರಿಷ್ಠ ಮಿತಿ 5,000 ಆಗಿದ್ದರೂ, ಟಿವಿಕೆ ಆಯೋಜಕರು 7,000 ಕ್ಕೂ ಹೆಚ್ಚು ಜನರಿಗೆ ಸ್ಥಳಕ್ಕೆ ಪ್ರವೇಶಿಸಲು ಅವಕಾಶ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಾವಿನ ಹಿಂದಿನ ಕಾರಣ ಖಚಿತವಾದ ನಂತರ, ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರ್ಯಾಲಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂದು ಹಲವರು ಆರೋಪಿಸಿದ್ದಾರೆ. ಹೀಟ್‌ವೇವ್‌ನಿಂದ ಹಲವರು ಕುಸಿದು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನೋಡಿರಿ

