3ನೇ ಪಂದ್ಯ ಡ್ರಾ.. ಯಾವ ತಂಡಕ್ಕೆ ಪ್ಲಸ್? -2 ಪಂದ್ಯಗಳಲ್ಲಿ ಸೋತರೆ ಆಸ್ಟ್ರೇಲಿಯಾ ರೇಸ್ ನಿಂದ ಔಟ್!
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಐದು ಪಂದ್ಯಗಳು ಭಾರತ ಮತ್ತು ಆಸ್ಟ್ರೇಲಿಯಾ ಪಾಲಿಗೆ ಮಹತ್ವದ್ದಾಗಿದೆ. ಯಾಕಂದ್ರೆ ಉಭಯ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಲ್ಲಿದೆ. ಇದೀಗ ಈ ಸರಣಿಯ ಮೂರನೇ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೂ, ಟೀಮ್ ಇಂಡಿಯಾಗೆ ಚಿಂತೆಯಿಲ್ಲ. ಯಾಕಂದ್ರೆ ಭಾರತ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೇರಬಹುದು. ಅಂದರೆ ಈ ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ಗೆದ್ದರೆ ಮಾತ್ರ ಫೈನಲ್ಗೆ ಪ್ರವೇಶಿಸುವುದು ಬಹುತೇಕ ಖಚಿತ. ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿದ್ರೆ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಸೆಕೆಂಡ್ ಪ್ಲೇಸ್ನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೇರಬಹುದು.
ಇದನ್ನೂ ಓದಿ: IND ಕಾಪಾಡಿದ್ದೇ ಬುಮ್ರಾ, ದೀಪ್.. ಫಾಲೋ-ಆನ್ ತಪ್ಪಿದ್ದೇಗೆ.. ಏನಿದು ರೂಲ್ಸ್? – AUS ವಿರುದ್ಧದ ಮ್ಯಾಚ್ ಡ್ರಾ ಆಗುತ್ತಾ?
ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧ ಮುಂದಿನ ಎರಡು ಪಂದ್ಯಗಳಲ್ಲಿ ಸೋತರೆ ಫೈನಲ್ ರೇಸ್ನಿಂದ ಹೊರಬೀಳಲಿದೆ. ಯಾಕಂದ್ರೆ ಟೀಮ್ ಇಂಡಿಯಾ 3-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದರೆ, ಆಸ್ಟ್ರೇಲಿಯಾ ತಂಡದ ಶೇಕಡಾವಾರು ಅಂಕ ಕಡಿಮೆಯಾಗಲಿದೆ. ಅಲ್ಲದೆ ಮುದೆ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆದ್ದರೂ ಕೂಡ 57% ಅಂಕಗಳನ್ನು ಮಾತ್ರ ಪಡೆಯಲಿದೆ. ಇದರಿಂದ 60.52% ಅಂಕಗಳೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡುವುದು ಖಚಿತವಾಗಲಿದೆ. ಬಟ್ ಇದು ಸಾಧ್ಯ ಆಗ್ಬೇಕು ಅಂದ್ರೆ ಭಾರತ ತಂಡವು ಮೆಲ್ಬೋರ್ನ್ ಹಾಗೂ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿಯಲೇಬೇಕು.
ಸದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಉಭಯ ತಂಡಗಳು ತಲಾ 1-1 ಪಂದ್ಯಗಳನ್ನು ಗೆದ್ದು ಸರಣಿ ಸಮಬಲ ಸಾಧಿಸಿವೆ. ಮೂರನೇ ಮ್ಯಾಚ್ ಡ್ರಾ ಆಗಿರೋದ್ರಿಂದ ಮುಂದಿನ 2 ಪಂದ್ಯಗಳೇ ಟರ್ನಿಂಗ್ ಪಾಯಿಂಟ್ ಆಗಲಿದೆ. ಹೀಗಾಗಿ ಮೆಲ್ಬೋರ್ನ್ ಹಾಗೂ ಸಿಡ್ನಿಯಲ್ಲಿ ನಡೆಯಲಿರುವ 4ನೇ ಮತ್ತು 5ನೇ ಪಂದ್ಯದಲ್ಲಿ ಭರ್ಜರಿ ಪೈಪೋಟಿ ಇರೋದಂತೂ ಪಕ್ಕಾ.