ರಾಮೇಶ್ವರಂ ಕೆಫೆ ಸ್ಪೋಟ​ ಬೆನ್ನಲ್ಲೇ ಮತ್ತೊಂದು ವಿಧ್ವಂಸಕ ಕೃತ್ಯ ಬಯಲು – ನಿರ್ಮಾಣ ಹಂತದ ಕಟ್ಟಡದಲ್ಲಿ 6 ಬಾಂಬ್​ಗಳು ಪತ್ತೆ!

ರಾಮೇಶ್ವರಂ ಕೆಫೆ ಸ್ಪೋಟ​ ಬೆನ್ನಲ್ಲೇ ಮತ್ತೊಂದು ವಿಧ್ವಂಸಕ ಕೃತ್ಯ ಬಯಲು – ನಿರ್ಮಾಣ ಹಂತದ ಕಟ್ಟಡದಲ್ಲಿ 6 ಬಾಂಬ್​ಗಳು ಪತ್ತೆ!

ಸಿಲಿಕಾನ್‌ ಸಿಟಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಬಾಂಬ್‌ ಬ್ಲಾಸ್ಟ್‌ ಆಗಿತ್ತು. ಈ ಸ್ಫೋಟದಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆಯಿಂದಾಗಿ  ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಬಾಂಬ್‌ ಕೃತ್ಯ ಬೆಳಕಿಗೆ ಬಂದಿದೆ. ಕಾಮಗಾರಿ ನಡೆಯುತ್ತಿದ್ದ ಮನೆಯೊಂದರಲ್ಲಿ ಆರು ಸಜೀವ ಬಾಂಬ್​ಗಳು ಪತ್ತೆಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ – ನಾಲ್ವರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

ಬಿಹಾರದ ದರ್ಭಾಂಗದಲ್ಲಿ ಈ ಕೃತ್ಯ ಬೆಳಕಿಗೆ ಬಂದಿದೆ. ಕಾಮಗಾರಿ ನಡೆಯುತ್ತಿದ್ದ ಮನೆಯೊಂದರಲ್ಲಿ ಶುಕ್ರವಾರ ರಾತ್ರೋರಾತ್ರಿ ಸ್ಫೋಟದ ಶಬ್ದ ಕೇಳಿ ಬಂದಿದೆ. ಗಾಬರಿಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಸ್ಥಳಕ್ಕೆ ಬಂದ ದರ್ಭಾಂಗದ ಬಹದ್ದೂರ್​ಪುರ ಪೊಲೀಸರಿಗೆ ಎರಡು ಬಾಂಬ್​ಗಳು ಹೊಡೆದು ಚೂರಾಗಿ ಬಿದ್ದಿರುವುದು ಕಂಡು ಬಂದಿದೆ.

ಈ ಸಂಬಂಧ ತನಿಖೆ ನಡೆಸಿದಾಗ ಅಲ್ಲಿ ಇನ್ನೂ ಆರು ಬಾಂಬ್​ಗಳು ಪತ್ತೆಯಾಗಿವೆ. ಈ ಘಟನೆ ಕುರಿತು ತನಿಖೆ ಮುಂದುವರೆದಿದ್ದು, ಪೊಲೀಸರು ಆರು ಬಾಂಬ್​ಗಳನ್ನು ವಶಪಡಿಸಿಕೊಂಡು ಯಾವುದೇ ಅಪಾಯವಾಗದಂತೆ ನಿಷ್ಕ್ರಿಯಗೊಳಿಸಿದ್ದಾರೆ.

Shwetha M