6.5 ತಿಂಗಳ ಮಗುವಿನ ಪ್ರಾಣ ಕಸಿದ ಒಣಗಿದ ದಾಸವಾಳ – ನಿಜಕ್ಕೂ ಆಗಿದ್ದೇನು ಗೊತ್ತಾ?

ಒಣಗಿದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ ಕಣ್ಣೀರು ತರಿಸುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಈ ಮನಕಲುಕುವ ಘಟನೆ ನಡೆದಿದೆ. ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವನ್ನು ಆರೂವರೆ ತಿಂಗಳ ಮಗು ನುಂಗಿದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದೆ. ದೊಡ್ಡಹೆ ಜ್ಜೂರಿನ ಸುದರ್ಶನ್-ನವ್ಯ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಸಾವನ್ನಪ್ಪಿದ ಮಗು.
ಇದನ್ನೂ ಓದಿ: ಬಲಗೈ ಬದಲು ಬಾಲಕನ ಎಡಗೈ ಆಪರೇಷನ್! – ಅಯ್ಯೋ.. ವೈದ್ಯರ ಎಡವಟ್ಟಿಗೆ ಬೆರಳೇ ಕಟ್!
ತನ್ನ ಅಣ್ಣನೊಂದಿಗೆ ಆಟವಾಡುತ್ತಿದ್ದ ಚಿನ್ಮಿಯಿಗೌಡ, ಮನೆಯ ಹೊಸಲಿಗೆ ಪೂಜೆಗೆ ಇಟ್ಟಿದ್ದ ದಾಸವಾಳದ ಹೂವಿನ ತುಂಡನ್ನು ಬಾಯಿಗೆ ಹಾಕಿಕೊಂಡಿದೆ. ಈ ವೇಳೆ ಅಣ್ಣ ಕಿತ್ತುಕೊಳ್ಳುತ್ತಾನೆಂದು ಮಗು ಒಣಗಿದ ಹೂವನ್ನು ನುಂಗಿದ್ದರಿಂದ ಉಸಿರಾಟದ ತೊಂದರೆಯಾಗಿ ಅಸ್ವಸ್ಥಗೊಂಡಿದೆ.
ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.

ನೋಡಿರಿ

