ಕೋವಿಡ್‌ ಪಾಸಿಟಿವ್‌ ಬಂದ್ರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ – ದಿನೇಶ್‌ ಗುಂಡೂರಾವ್

ಕೋವಿಡ್‌ ಪಾಸಿಟಿವ್‌ ಬಂದ್ರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ – ದಿನೇಶ್‌ ಗುಂಡೂರಾವ್

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅನ್ನೋ ಹಾಗೆ ಕೊರೊನಾ ಮತ್ತೆ ವಕ್ಕರಿಸಿದೆ. ದಿನದಿಂದ ದಿನಕ್ಕೆ ಅದರ ಅಬ್ಬರ ಜೋರಾಗುತ್ತಿದೆ. ರಾಜ್ಯದಲ್ಲಿ ರೂಪಾಂತರಿ ಕೊರೊನಾ ವೈರಸ್‌ ವೇಗವಾಗಿ ಹರಡುತ್ತಿದ್ದು, ಬರೋಬ್ಬರಿ 34 ಜನರಿಗೆ ಜೆಎನ್‌ 1 ರೂಪಾಂತರಿ ಕೊರೊನಾ ವೈರಸ್‌ ತಗುಲಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ. ಕೋವಿಡ್‌ ಬಂದ್ರೆ 7 ದಿನ ಹೋಂ ಐಸೊಲೇಷನ್ ನಲ್ಲಿರಬೇಕು ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಯುವನಿಧಿ ಯೋಜನೆ ನೋಂದಣಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಕೊರೊನಾ ಬಂದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಹಾಗೆಂದು ಜನರು ಆತಂಕಪಡುವ ಅಗತ್ಯವಿಲ್ಲ, ಕಾಳಜಿ ವಹಿಸಿಕೊಳ್ಳಿ ಎಂದು ಹೇಳಿದ್ದಾರೆ.

ಇನ್ನು ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ. ಜನರೇ ಜನದಟ್ಟಣಿಯಲ್ಲಿ ಸೇರದಂತೆ ತಮ್ಮನ್ನು ತಾವು ಸಾಧ್ಯವಾದಷ್ಟು ನಿರ್ಬಂಧ ಹೇರಿಕೊಳ್ಳಿ. ಜ್ವರ, ಕೆಮ್ಮು, ನೆಗಡಿ, ಶೀತ, ಗಂಟಲು ನೋವು ಬಂದರೆ ಮನೆಯಲ್ಲಿಯೇ ಉಳಿದುಕೊಳ್ಳಿ. ಇದು ಖಾಸಗಿ ವಲಯಕ್ಕೂ ನಿಯಮ ಅನ್ವಯವಾಗುತ್ತದೆ, ಕಡ್ಡಾಯವಾಗಿ ಉದ್ಯೋಗಿಗಳಿಗೆ ಕೋವಿಡ್ ರಜೆ ನೀಡಬೇಕು ಎಂದು ತಿಳಿಸಿದ್ದಾರೆ.

ಮಕ್ಕಳಲ್ಲಿ ಕೋವಿಡ್ ಲಕ್ಷಣಗಳು, ಜ್ವರ, ಕೆಮ್ಮು ಮಕ್ಕಳಲ್ಲಿ ಕಂಡುಬಂದರೆ ಶಾಲೆಗೆ ಕಳುಹಿಸದೇ ಇರುವುದು ಉತ್ತಮ. ಮಕ್ಕಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ನಿರ್ಬಂಧ ಹಾಕುವುದು ಒಳಿತು. ಹೊರಗೆ ಓಡಾಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಿ. ಶುಚಿತ್ವ ಕಾಪಾಡಿ, ಸ್ಯಾನಿಟೈಸರ್ ಬಳಸಿ ಎಂದು ತಿಳಿಸಿದರು.

Shwetha M