7 ಲಕ್ಷ ಆದಾಯ ಇರೋರಿಗೆ ಯಾವುದೇ ತೆರಿಗೆ ಇಲ್ಲ – ರೈತರಿಗೆ ಕಡಿಮೆ ಬಡ್ಡಿ ಅಥವಾ ಶೂನ್ಯ ಬಡ್ಡಿ ಸಾಲ

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಎರಡನೇ ಆಡಳಿತಾವಧಿಯ ಕೊನೆಯ ಬಜೆಟ್ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 6ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.
ಈ ಬಾರಿಯ ಬಜೆಟ್‌ನಲ್ಲಿ ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ. 40 ಸಾವಿರ ರೈಲ್ವೆ ಕೋಚ್ ಬದಲಾವಣೆಗೆ ಕ್ರಮ ಕೈಗೊಂಡಿದ್ದೇವೆ, ಮೆಟ್ರೋ, ವಂದೇ ಭಾರತ್ ರೈಲಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ನಿರ್ಮಾಲ ಸೀತಾರಾಮನ್ ತಿಳಿಸಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು – ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗಾಗಿ ಮನೆ ನಿರ್ಮಾಣ
ಇನ್ನು ತ್ರಿವಳಿ ತಲಾಖ್ ಕುರಿತು ಕೂಡ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ್ದಾರೆ. ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರವಾಗಿಸುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳನ್ನು ನೀಡುವುದು ಅವರ ಘನತೆಯನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.
10 ವರ್ಷಗಳಲ್ಲಿ ಉನ್ನತ ಶಿಕ್ಷಣಕ್ಕೆ ಶೇ.28 ರಷ್ಟು ಮಹಿಳೆಯರು ದಾಖಲಾಗಿದ್ದಾರೆ. ಒನ್ ನೇಷನ್ ಒನ್ ಮಾರ್ಕೆಟ್ ಜಾರಿ ಪಿಎಂ ಆವಾಸ್ ಯೋಜನೆಯಲ್ಲಿ ಶೇ.70 ರಷ್ಟು ಮನೆ ನಿರ್ಮಾಣ ಮಾಡಲಾಗುತ್ತದೆ. 7 ಲಕ್ಷ ಆದಾಯ ಇರೋರಿಗೆ ಯಾವುದೇ ತೆರಿಗೆ ಇಲ್ಲ. ರೈತರಿಗೆ ಕಡಿಮೆ ಬಡ್ಡಿ ಅಥವಾ ಶೂನ್ಯ ಬಡ್ಡಿ ಸಾಲವನ್ನು ನೀಡಲಾಗುವುದು. ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.