ಸಿಲಿಕಾನ್ ಸಿಟಿಯಲ್ಲಿ ಅಪರಾಧ ಕೃತ್ಯ ತಡೆಗೆ ದಿಟ್ಟ ಕ್ರಮ – ಹೈರೆಸಲ್ಯೂಷನ್ ಕ್ಯಾಮರಾ ಅಳವಡಿಕೆಗೆ ಮುಂದಾದ ಗೃಹ ಇಲಾಖೆ

ಸಿಲಿಕಾನ್ ಸಿಟಿಯಲ್ಲಿ ಅಪರಾಧ ಕೃತ್ಯ ತಡೆಗೆ ದಿಟ್ಟ ಕ್ರಮ – ಹೈರೆಸಲ್ಯೂಷನ್ ಕ್ಯಾಮರಾ ಅಳವಡಿಕೆಗೆ ಮುಂದಾದ ಗೃಹ ಇಲಾಖೆ

ಬೆಂಗಳೂರಿನಲ್ಲಿ ಅಪರಾಧ ಕೃತ್ಯ ತಡೆಗೆ ಗೃಹಇಲಾಖೆ ದಿಟ್ಟ ಕ್ರಮ ಕೈಗೊಂಡಿದೆ. ನಗರದ ಜನಸಂದಣಿ, ಇಂಟರ್ ಸೆಕ್ಷನ್, ಮಹಿಳೆಯರು ಓಡಾಡುವ ಸ್ಥಳಗಳು ಸೇರಿದಂತೆ ಹಲವು ಕಡೆ 7 ಸಾವಿರ ಹೈರೆಸಲ್ಯೂಷನ್ ಕ್ಯಾಮರಾ ಅಳವಡಿಸಲಾಗಿದೆ. ಜತೆಗೆ ಬೆಂಗಳೂರಿನ 30 ಕಡೆ ಸೇಫ್ಟಿ ಐಲ್ಯಾಂಡ್ ಓಪನ್ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಶಾಂತಿ, ನೆಮ್ಮದಿ ಇಳಿಕೆ, ಜನಸಾಮಾನ್ಯರ ಆತಂಕ ಏರಿಕೆ! – ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ

80 ಠಾಣೆಗಳಲ್ಲಿ ಕ್ಯಾಮರಾ ದೃಶ್ಯಾವಳಿ ನೋಡುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ 30 ಕಡೆ ಸೇಫ್ಟಿ ಐಲ್ಯಾಂಡ್ ಓಪನ್ ಮಾಡಲಾಗಿದೆ. ಸೇಫ್ಟಿ ಐಲ್ಯಾಂಡ್‌ನಲ್ಲಿ ಬಟನ್ ಒತ್ತಿದರೆ, ಪೊಲೀಸರಿಗೆ ಮಾಹಿತಿ ಬರುತ್ತೆ. ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಬಂದು ರಕ್ಷಣೆ ಮಾಡುತ್ತಾರೆ. ಪೊಲೀಸ್ ಇಲಾಖೆ ಜನಸ್ನೇಹಿ ಆಗಬೇಕು. ಪೊಲೀಸ್ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ತಿಳಿಹೇಳಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಠಾಣೆಯಲ್ಲಿ ದೂರು ಸ್ವೀಕರಿಸಲ್ಲ ಎಂಬ ದೂರುಗಳು ಬರಬಾರದು. ನಾನು ಕೂಡ ಠಾಣೆಗಳಿಗೆ ಭೇಟಿ ನೀಡುತ್ತೇನೆ. ಸರ್ಕಾರ ಪೊಲೀಸರಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

suddiyaana