ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ – 8 ಮಂದಿ ಬಂಧನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಆರೋಪದಡಿ ಗುಜರಾತ್‍ನ 8 ಮಂದಿಯನ್ನು ಬಂಧಿಸಲಾಗಿದೆ. ಇದುವರೆಗೆ 185 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ನಂದಿನಿ ಮೊಸರಿನ ಪ್ಯಾಕೆಟ್ ಮೇಲೆ ಹಿಂದಿ ಪದ – ವಿರೋಧ, ಟೀಕೆ ಬೆನ್ನಲ್ಲೇ ಆದೇಶ ಹಿಂಪಡೆದ ಎಫ್‌ಎಸ್‌ಎಸ್‌ಎಐ
ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಂಟಿಸಿದವರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ. ಐಪಿಎಲ್ ಟೂರ್ನಿಯ ಓಪನಿಂಗ್ ಸೆರಮನಿಯಂದೇ ಅಹ್ಮದಾಬಾದ್ನ ವಿವಿಧೆಡೆ ಮೋದಿ ಹಠಾವೋ, ದೇಶ್ ಬಚಾವೋ ಅನ್ನೋ ಪೋಸ್ಟರ್ಗಳನ್ನ ಅಂಟಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಂಟು ಮಂದಿಯನ್ನ ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಗುಜರಾತ್ ಆಪ್ ಮುಖ್ಯಸ್ಥ ಇಸುದನ್ ಗಧ್ವಿ, ಬಂಧಿತರೆಲ್ಲ ತಮ್ಮ ಪಕ್ಷದ ಕಾರ್ಯಕರ್ತರು ಅಂತಾ ಹೇಳಿಕೊಂಡಿದ್ದಾರೆ. ಬಂಧನ ಬಿಜೆಪಿಯ ಸರ್ವಾಧಿಕಾರಿ ಧೋರಣೆಯನ್ನು ಸೂಚಿಸುತ್ತದೆ ಎಂದು ಆರೋಪಿಸಿದ್ದಾರೆ.
ಪೊಸ್ಟರ್ ಅಂಟಿಸಿರುವ ಕಾರ್ಯಕರ್ತರನ್ನು ಬಂಧಿಸಿ ವಿವಿಧ ಸೆಕ್ಷನ್‍ಗಳ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಎಷ್ಟೇ ಕಷ್ಟ ಕೊಟ್ಟರೂ ನಮ್ಮ ಪಕ್ಷದ ಕಾರ್ಯಕರ್ತರು ಹೋರಾಡುತ್ತಾರೆ ಎಂದು ಗಧ್ವಿ ಟ್ವೀಟ್ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಕಾರ್ಯಕರ್ತರ ಬಂಧನದ ಕುರಿತು ಪ್ರತಿಕ್ರಿಯಿಸಿ, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ, ಬ್ರಿಟಿಷರ ವಿರುದ್ಧ ಪೋಸ್ಟರ್ ಹಾಕುವವರನ್ನು ಬಂಧಿಸಿರಲಿಲ್ಲ ಅಂತಾ ಕಿಡಿಕಾರಿದ್ದಾರೆ.