ಕೋಲ್ಡ್ ಸ್ಟೋರೇಜ್ ಮೇಲ್ಚಾವಣಿ ಕುಸಿದು 8 ಜನ ಸಾವು – 11 ಮಂದಿಯನ್ನ ರಕ್ಷಿಸಿದ್ದೇ ರೋಚಕ!

ಕೋಲ್ಡ್ ಸ್ಟೋರೇಜ್ ಮೇಲ್ಚಾವಣಿ ಕುಸಿದು 8 ಜನ ಸಾವು – 11 ಮಂದಿಯನ್ನ ರಕ್ಷಿಸಿದ್ದೇ ರೋಚಕ!

ಮಾಲೀಕರ ಬೇಜವಾಬ್ದಾರಿಯಿಂದ ಕೋಲ್ಡ್ ಸ್ಟೋರೇಜ್​ನ ಮೇಲ್ಚಾವಣಿ ಕುಸಿದು 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂಭಾಲ್ ಚಂದೌಸಿ ಪ್ರದೇಶದಲ್ಲಿ ದುರಂತ ಸಂಭವಿಸಿದ್ದು 11 ಜನರನ್ನ ರಕ್ಷಣೆ ಮಾಡಲಾಗಿದೆ.

ಆಲೂಗಡ್ಡೆ ಕೋಲ್ಡ್ ಸ್ಟೋರೇಜ್​ನಲ್ಲಿ ಘಟನೆ ನಡೆದಿದ್ದು, ಮಾಲೀಕರಾದ ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆಯೇ ಕೋಲ್ಡ್ ಸ್ಟೋರೇಜ್‍ ಶಿಥಿಲಾವಸ್ಥೆಯಲ್ಲಿದೆ ಎಂದು ವರದಿಯಾಗಿತ್ತು. ಆದರೆ ಯಾರೊಬ್ಬರೂ ಕೂಡ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.   ಅವಘಡ ಸಂಭವಿಸಿದ ಬೆನ್ನಲ್ಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಈ ಬಗ್ಗೆ ಮೊರಾಬಾದ್ ಡಿಐಜಿ ಶಲಭ್ ಮಾಥುರ್ ಮಾತನಾಡಿ, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 11 ಮಂದಿಯನ್ನು ರಕ್ಷಿಸಲಾಗಿದೆ. ಕಟ್ಟಡದಲ್ಲಿ ನೆಲಮಾಳಿಗೆಯಿದ್ದು, ಅಲ್ಲಿಯೂ ಯಾರಾದರೂ ಸಿಲುಕಿಕೊಂಡಿದ್ದಾರಾ ಎಂದು ಹುಡುಕುವ ಪ್ರಯತ್ನ ನಡೆಸುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ : ಹೆಚ್​3ಎನ್2 ಸೋಂಕಿ​ನಿಂದಲೇ ಮೆಡಿಕಲ್ ವಿದ್ಯಾರ್ಥಿ ಸಾವು – ಡೆಡ್ಲಿ ವೈರಸ್​ ಲಕ್ಷಣ ಹೇಗಿತ್ತು ಗೊತ್ತಾ..?

ಅವಶೇಷಗಳಡಿ ಸಿಲುಕಿರುವವರನ್ನು ಹುಡುಕಲು ಅಧಿಕಾರಿಗಳು ಸ್ನಿಫರ್ ಡಾಗ್‍ಗಳನ್ನು ಬಳಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಘಟನೆಗೆ ಸಂಬಂಧಿಸಿ ಕೋಲ್ಡ್ ಸ್ಟೋರೇಜ್‍ನ ಮಾಲೀಕ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಜೊತೆಗೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಾಪತ್ತೆಯಾದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

suddiyaana