‘800’ ಸಿನಿಮಾ ರಿಲೀಸ್ ದಿನಾಂಕ ಘೋಷಣೆ – ಅಕ್ಟೋಬರ್ 6ರಂದು ಮುತ್ತಯ್ಯ ಮುರಳೀಧರನ್ ಬಯೋಪಿಕ್ ರಿಲೀಸ್

‘800’ ಸಿನಿಮಾ ರಿಲೀಸ್ ದಿನಾಂಕ ಘೋಷಣೆ – ಅಕ್ಟೋಬರ್ 6ರಂದು ಮುತ್ತಯ್ಯ ಮುರಳೀಧರನ್ ಬಯೋಪಿಕ್ ರಿಲೀಸ್

ವಿಶ್ವ ಕಂಡ ಅಪ್ರತಿಮ ಸ್ಪಿನ್ನರ್.. ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಮುತ್ತಯ್ಯ ಮುರಳೀಧರನ್. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 800 ವಿಕೆಟ್‌ಗಳನ್ನು ಪಡೆದ ಏಕೈಕ ಬೌಲರ್ ಮುತ್ತಯ್ಯ ಮುರಳೀಧರನ್ ಜೀವನವನ್ನಾಧರಿಸಿ ‘800’ ಎಂಬ ಸಿನಿಮಾ ಬರುತ್ತಿದೆ.  ಈ ಚಿತ್ರದ ರಿಲೀಸ್ ದಿನಾಂಕ ಘೋಷಣೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ‘800’ ಸಿನಿಮಾ ಟ್ರೇಲರ್ ರಿಲೀಸ್ ಮಾಡಿದ ಸಚಿನ್ ತೆಂಡೂಲ್ಕರ್ – ಗೆಳೆಯ ಮುತ್ತಯ್ಯ ಮುರುಳಿಧರನ್ ಪಟ್ಟ ಕಷ್ಟ ಎಲ್ಲರಿಗೂ ಗೊತ್ತಾಗಬೇಕು ಎಂದ ಕ್ರಿಕೆಟ್ ದೇವರು

ಮುತ್ತಯ್ಯ ಮುರಳೀಧರನ್ ಅವರು ಟೆಸ್ಟ್ ವೃತ್ತಿ ಜೀವನದಲ್ಲಿ 800 ವಿಕೆಟ್ ಪಡೆದಿದ್ದಾರೆ. ಈ ಸಾಧನೆ ಮಾಡಿರುವ ಏಕೈಕ ಬೌಲರ್ ಎನ್ನುವ ಖ್ಯಾತಿಗೂ ಪಾತ್ರರಾಗಿದ್ದಾರೆ. ಇದೇ ಕಾರಣಕ್ಕೆ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್‌ಗೆ ‘800’ ಎಂಬ ಶೀರ್ಷಿಕೆ ಇಡಲಾಗಿದೆ. ‘800’ ಚಿತ್ರ ಬಹುಭಾಷೆಯಲ್ಲಿ ನಿರ್ಮಾಣ ಆಗಿದ್ದು, ಟ್ರೇಲರ್ ಮೂಲಕ ಗಮನ ಸೆಳೆದಿದೆ. ಈ ಸಿನಿಮಾ ಅಕ್ಟೋಬರ್ 6ರಂದು ರಿಲೀಸ್ ಆಗಲಿದೆ ಎಂದು ಚಿತ್ರ ತಂಡ ಮಾಹಿತಿ ನೀಡಿದೆ.

ಮುತ್ತಯ್ಯ ಮುರಳೀಧರನ್ ಅವರು ಬಡ ಕುಟುಂಬದ ಹಿನ್ನೆಲೆಯಿಂದ ಬಂದವರು. ಕ್ರಿಕೆಟರ್ ಆಗಬೇಕು ಎನ್ನುವ ಕನಸು ಕಂಡರು. ಒಳ್ಳೆಯ ಸ್ಪಿನ್ ಬೌಲರ್ ಆದರು. ಮುತ್ತಯ್ಯ ಮುರಳೀಧರನ್ ಅವರ ಕ್ರಿಕೆಟ್ ಬದುಕು ಹಲವು ರೋಚಕ ಅಂಶಗಳಿಂದ ಕೂಡಿದೆ. ಸಾಕಷ್ಟು ವಿವಾದಗಳನ್ನು ಅವರು ಮಾಡಿಕೊಂಡಿದ್ದಾರೆ. ಅವುಗಳನ್ನು ಟ್ರೇಲರ್‌ನಲ್ಲಿ ತೋರಿಸಲಾಗಿದೆ. ಶ್ರೀಲಂಕಾ ತಂಡ ಕ್ರಿಕೆಟ್ ಆಡಲು ಪಾಕಿಸ್ತಾನಕ್ಕೆ ತೆರಳಿತ್ತು. ಈ ವೇಳೆ ಗುಂಡಿನ ದಾಳಿ ಆಗಿತ್ತು. ಈ ದಾಳಿಯ ಸಂದರ್ಭದಲ್ಲಿ ಮುತ್ತಯ್ಯ ಕೂಡ ದಾಳಿಗೆ ಒಳಗಾದ ಬಸ್‌ನಲ್ಲಿ ಇದ್ದರು. ಇದನ್ನೂ ಬಯೋಪಿಕ್‌ನಲ್ಲಿ ಸೇರಿಸಲಾಗಿದೆ. ಅವರ ವೈಯಕ್ತಿಕ ವಿಚಾರಗಳು ಈ ಚಿತ್ರದಲ್ಲಿವೆ. ‘800’ ಚಿತ್ರಕ್ಕೆ ಎಂ.ಎಸ್. ಶ್ರೀಪತಿ ನಿರ್ದೇಶನದಲ್ಲಿ ಮಾಡಿದ್ದಾರೆ. ಗಿಬ್ರಾನ್ ಅವರ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಸ್ಲಂ ಡಾಗ್ ಮಿಲಿಯನೇರ್’ ಸಿನಿಮಾದಲ್ಲಿ ನಟಿಸಿದ್ದ ಮಧುರ್ ಮಿತ್ತಲ್ ‘800’ ಚಿತ್ರದಲ್ಲಿ ಮುತ್ತಯ್ಯ ಮುರಳೀಧರನ್ ಪಾತ್ರವನ್ನು ನಿಭಾಯಿಸಿದ್ದಾರೆ. ಮುತ್ತಯ್ಯ ಅವರ ಪತ್ನಿಯ ಪಾತ್ರಕ್ಕೆ ಮಹಿಮಾ ನಂಬಿಯಾರ್ ನಟಿಸಿದ್ದಾರೆ. ತಮಿಳು, ತೆಲುಗು, ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಸಿನಿಮಾ ಮೂಡಿಬರುತ್ತಿದೆ. ಅಕ್ಟೋಬರ್ 6ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ.

Sulekha