2 ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ! – ಐವರು ವೈದ್ಯರ ಸೇರಿ 9 ಮಂದಿ ಅರೆಸ್ಟ್

2 ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ! – ಐವರು ವೈದ್ಯರ ಸೇರಿ 9 ಮಂದಿ ಅರೆಸ್ಟ್

ಬೆಂಗಳೂರು: ಕಾಲ ಬದಲಾದ್ರೂ ಜನರ ಮನಸ್ಥಿತಿ ಬದಲಾಗುತ್ತಿಲ್ಲ. ಹೆಣ್ಣು ಭ್ರೂಣ ಪತ್ತೆ ಹಚ್ಚುವುದು ಹತ್ಯೆ ಮಾಡುವುದು ನಿರಂತವಾಗಿ ನಡೆಯುತ್ತಲೇ ಇದೆ. ಸರ್ಕಾರಗಳು ಅದೆಷ್ಟೇ ಬೊಬ್ಬೆ ಹೊಡ್ರು ನಮ್ಮ ಜನಗಳಿಗೆ ಮಾತ್ರ ಬುದ್ದಿ ಕಲಿಯುತ್ತಿಲ್ಲ. ಭ್ರೂಣ ಹತ್ಯೆ ನಿಷಿದ್ಧವೆಂದು ಕಾನೂನು ತಂದ್ರು ಜನ ಮಾತ್ರ ಕ್ಯಾರೆ ಅಂತಿಲ್ಲ. ಜನರಿಗೆ ಅರಿವು ಮೂಡಿಸಬೇಕಾಗಿರುವವರೇ ಇಂತಹ ನೀಚ ಕೆಲಸಕ್ಕೆ ಕೈ ಹಾಕುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಇದೀಗ ಸುಮಾರು 2 ವರ್ಷಗಳಿಂದ ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ಐವರು ವೈದ್ಯರು ಸೇರಿ 9 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:  ಒಂದೇ ಗಂಟೆಯಲ್ಲಿ 29 ಜನರಿಗೆ ಕಚ್ಚಿದ ಬೀದಿ ನಾಯಿ – ಶ್ವಾನದ ಪರೀಕ್ಷೆ ವೇಳೆ ರೇಬಿಸ್‌ ರೋಗ ಪತ್ತೆ

ಬೆಂಗಳೂರು ಬೈಯಪ್ಪನಹಳ್ಳಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ ಐವರು ವೈದ್ಯರು ಸೇರಿ, 9 ಜನರನ್ನು ಬಂಧಿಸಿದ್ದಾರೆ. ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹಾಗೂ ವೈದ್ಯರಾದ ಡಾ. ತುಳಸಿರಾಮ್, ಡಾ. ಚಂದನ್ ಬಲ್ಲಾಳ್ ಮತ್ತು ಮೀನಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್, ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸರು ಕಾರ್ಯಾಚರಣೆ ವೇಳೆ ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಎಂಬವರನ್ನ ಬಂಧಿಸಲಾಗಿತ್ತು. ಅವರನ್ನ ವಿಚಾರಣೆಗೆ ಒಳಪಡಿಸಿದ ನಂತರ ಈ ಪ್ರಕರಣದ ಹಿಂದಿರುವ ವೈದ್ಯರ ಹೆಸರು ಕೇಳಿಬಂದಿತು. ಬಳಿಕ ತನಿಖೆ ಮುಂದುವರಿಸಿದ ಪೊಲೀಸರು ಕೃತ್ಯದ ಹಿಂದಿದ್ದ ಚನ್ನೈ ಮೂಲದ ಡಾ ತುಳಸಿರಾಮ್, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ, ಡಾ.ಚಂದನ್ ಬಲ್ಲಾಳ್ ಮತ್ತು ಪತ್ನಿ ಮೀನಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್ ಎಂಬವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಒಟ್ಟು 9 ಮಂದಿ ಸೇರಿ ಮಾಡಿಕೊಂಡು ವ್ಯವಸ್ಥಿತವಾಗಿ ಕೃತ್ಯ ಎಸಗುತ್ತಿದ್ದರು. ಪ್ರತಿ ತಿಂಗಳು 20 ರಿಂದ 25 ಭ್ರೂಣ ಹತ್ಯೆ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಲ್ಲಿ ಸುಮಾರು 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಮೈಸೂರಿನ ಉದಯಗಿರಿಯಲ್ಲಿರುವ ಆಸ್ಪತ್ರೆಯೊಂದರಲ್ಲಿ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Shwetha M