ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾ*ವು!

ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಸಂಭವಿಸಿದೆ. ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ಶಿವಮೊಗ್ಗ ನಗರದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂದು ಗುರುತಿಸಲಾಗಿದೆ. ಘಟನೆಯಿಂದ ಕುಟುಂಬದಲ್ಲಿ ಶೋಕ ಮಡುಗಟ್ಟಿದ್ದು, ಪಾಲಕರ ಆಕ್ರಂದನ ಮನಕಲಕುವಂತಿದೆ.
ಇದನ್ನೂ ಓದಿ: ಬೆಂಗಳೂರಿನ ಫಾಕ್ಸ್ಕಾನ್ನಲ್ಲಿ ತಲೆತಗ್ಗಿಸುವ ಘಟನೆ – ನವಜಾತ ಶಿಶುವಿಗೆ ಜನ್ಮ ನೀಡಿ, ಶೌಚಾಲಯಕ್ಕೆ ತುಂಬಿದ ತಾಯಿ
ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪ್ರಣಮ್ಯ ತನ್ನ ಚಿಕ್ಕಮ್ಮನ ಮನೆ ಲಕ್ಕಿನಕೊಪ್ಪಕ್ಕೆ ತೆರಳಿದ್ದಳು. ಏಪ್ರಿಲ್ 20ರಂದು ಚಿಕ್ಕಮ್ಮನ ಮಕ್ಕಳು ಕೀಟಲೆ ಕೊಡುತ್ತಿದ್ದ ಕಾರಣ ಪ್ರಣಮ್ಯ ಒಬ್ಬಳೇ ಕೋಣೆಯಲ್ಲಿ ಬಾಗಿಲು ಹಾಕಿಕೊಂಡು ಪಂಚೆ ಬಳಸಿ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದಳು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಆಟವಾಡುವ ಸಂದರ್ಭದಲ್ಲಿ ಪಂಚೆಯ ಕುಣಿಕೆ ಕುತ್ತಿಗೆಗೆ ಬಿಗಿದುಕೊಂಡ ಪರಿಣಾಮ ಉಸಿರಾಟಕ್ಕೆ ಅಡಚಣೆ ಉಂಟಾಗಿ ಪ್ರಣಮ್ಯ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ. ಕುಟುಂಬದವರು ಬಾಗಿಲು ತೆರೆಯುವಷ್ಟರಲ್ಲಿ ಬಾಲಕಿ ಪ್ರಾಣ ಕಳೆದುಕೊಂಡಿದ್ದಳು.
ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಯ ಸುತ್ತಮುತ್ತಿನ ಪರಿಸ್ಥಿತಿಗಳನ್ನು ಪರಿಶೀಲಿಸುತ್ತಿದ್ದಾರೆ. ಮಕ್ಕಳ ಸುರಕ್ಷತೆ ಕುರಿತು ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನೋಡಿರಿ

