ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು – ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಣೆ

ದಾವಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ(94) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ತೀವ್ರ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಇದನ್ನೂ ಓದಿ: ಸ್ಮೃತಿ ಮಂಧಾನ ತಂದೆಗೆ ಹೃದಯಾಘಾತ – ಮುಹೂರ್ತದ ದಿನವೇ ನಿಂತ ಸ್ಮೃತಿ ಮಂಧಾನ ಮದುವೆ
ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಶಾಮನೂರು ಅವರ ಆರೋಗ್ಯ ತೀರಾ ಹದಗೆಟ್ಟಿದೆ.
ಶಾಸಕ ಶಾಮನೂರು ಶಿವಶಂಕರಪ್ಪ ಅವ್ರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಖಾಸಗಿ ಆಸ್ಪತ್ರೆಯಲ್ಲಿ ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ರಾಜ್ಯದ ಹಿರಿಯ ನಾಯಕರು ಆಸ್ಪತ್ರೆಗೆ ಆಗಮಿಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಶಾಮನೂರು ಆರೋಗ್ಯ ವಿಚಾರಿಸಿದ್ದರು. ಸದ್ಯ ಶಾಮನೂರು ಶಿವಶಂಕರಪ್ಪ ಅವರು ಕೂಡ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎನ್ನಲಾಗ್ತಿದೆ.

ನೋಡಿರಿ

