ಹನುಮ ಜಯಂತಿ ಆಚರಣೆಯ ಸಂಭ್ರಮದಲ್ಲಿ ‘ಆದಿಪುರುಷ್’ ಸಿನಿಮಾ ಪೋಸ್ಟರ್ ರಿಲೀಸ್

ಹನುಮ ಜಯಂತಿ ಆಚರಣೆಯ ಸಂಭ್ರಮದಲ್ಲಿ ಆದಿಪುರುಷ್ ಸಿನಿಮಾ ತಂಡ ಅಭಿಮಾನಿಗಳಿಗೆ ವಿಶೇಷ ಗಿಫ್ಟ್ ನೀಡಿದೆ. ರಾಮಾಯಣದ ಕಥೆಯನ್ನು ಆಧರಿಸಿ ತೆರೆಮೇಲೆ ಬರುತ್ತಿರುವ ‘ಆದಿಪುರುಷ್’ ಸಿನಿಮಾದ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದೆ. ಬಂಡೆಯ ಮೇಲೆ ಕುಳಿತು ಧ್ಯಾನ ಮಾಡುತ್ತಿರುವ ಆಂಜನೇಯನ ಪೋಸ್ಟರ್ ಇದಾಗಿದೆ. ಈ ಪೋಸ್ಟರ್ ನ ಇನ್ನೊಂದು ವಿಶೇಷವೆಂದರೆ ರಾಮನ ಪಾತ್ರ ಮಾಡಿರುವ ಪ್ರಭಾಸ್. ರಾಮನ ಪಾತ್ರದಲ್ಲಿ ಕಾಣಿಸಿಕೊಂಡ ಪ್ರಭಾಸ್ ಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ: ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
ಈ ಮೊದಲು ಆದಿಪುರುಷ್ ಚಿತ್ರದ ರಿಲೀಸ್ ಆದ ಕೆಲ ಪೋಸ್ಟರ್ಗಳನ್ನು ಟ್ರೋಲ್ ಮಾಡಲಾಗಿತ್ತು. ಆದರೆ ಹನುಮಂತನ ಪೋಸ್ಟರ್ಗೆ ಮಾತ್ರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಓಂ ರಾವತ್ (Om Raut) ಅವರು ‘ಆದಿಪುರುಷ್’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ರಾಮಾಯಣದ ಕಥೆಯನ್ನು ಆಧರಿಸಿ ‘ಆದಿಪುರುಷ್’ ಸಿನಿಮಾ ಮೂಡಿಬರುತ್ತಿದೆ. ಜೂನ್ 16ರಂದು ಈ ಚಿತ್ರ ಬಿಡುಗಡೆ ಆಗಲಿದೆ. ರಾಮನಾಗಿ ಪ್ರಭಾಸ್, ಸೀತೆಯಾಗಿ ಕೃತಿ ಸನೋನ್, ಲಕ್ಷ್ಮಣನಾಗಿ ಸನ್ನಿ ಸಿಂಗ್, ರಾವಣನಾಗಿ ಸೈಫ್ ಅಲಿ ಖಾನ್ ಕಾಣಿಸಿಕೊಳ್ಳಲಿದ್ದಾರೆ. ರಾಮಾಯಣದಲ್ಲಿ ಆಂಜನೇಯನ ಪಾತ್ರಕ್ಕೆ ಹೆಚ್ಚು ಮಹತ್ವ ಇದೆ. ಈ ಪಾತ್ರದಲ್ಲಿ ದೇವದತ್ತ ನಾಗೆ ಅವರು ನಟಿಸುತ್ತಿದ್ದಾರೆ. ಹೊಸ ಪೋಸ್ಟರ್ನಲ್ಲಿ ಅವರನ್ನು ಕಂಡು ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ದೇವದತ್ತ ನಾಗೆ ಅವರು ಮಾರಾಠಿ ಧಾರಾವಾಹಿಯಲ್ಲಿ ಪೌರಾಣಿಕ ಪಾತ್ರ ಮಾಡಿ ಫೇಮಸ್ ಆಗಿದ್ದಾರೆ. ‘ಒನ್ಸ್ ಅಪಾನ್ ಎ ಟೈಮ್ ಇನ್ ಮುಂಬೈ ದೊಬಾರಾ’, ‘ತಾನಾಜಿ’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈಗ ಅವರನ್ನು ‘ಆದಿಪುರುಷ್’ ಸಿನಿಮಾದಲ್ಲಿ ಹನುಮಂತನ ವೇಷದಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.