ಅಳಿಯನಿಗೆ ಟಿಕೆಟ್ ಮಿಸ್ – ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಶಾಸಕ 

ಅಳಿಯನಿಗೆ ಟಿಕೆಟ್ ಮಿಸ್ – ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಶಾಸಕ 

ತುಮಕೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಾಂತರ ಪರ್ವ, ರಾಜೀನಾಮೆ ಜೋರಾಗಿಯೇ ಸಾಗುತ್ತಿದೆ. ಇದೀಗ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಸ್ಫೋಟಗೊಂಡಿದೆ. ಟಿಕೆಟ್ ಸಿಗದ್ದಕ್ಕೆ ರೊಚ್ಚಿಗೆದ್ದಿರುವ ಕೈ ಕಲಿಗಳು ಕಿಚ್ಚು ಹೊತ್ತಿಸಿದ್ದಾರೆ. ಅಷ್ಟೇ ಅಲ್ಲದೇ ಒಬ್ಬೊಬ್ಬರೇ ಕಾಂಗ್ರೆಸ್​ಗೆ ಗುಡ್ ಬೈ ಹೇಳುತ್ತಿದ್ದಾರೆ.

ಇದನ್ನೂ ಓದಿ: ತಂದೆ ಪಾಕಿಸ್ತಾನ, ತಾಯಿ ಬೆಂಗಳೂರು – ಭಾರತ ಪೌರತ್ವಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದೇಕೆ?

ಇದೀಗ ತುಮಕೂರು​ ನಗರ ಕಾಂಗ್ರೆಸ್​ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಅಳಿಯ ಎಸ್.ರಫೀಕ್ ಅಹ್ಮದ್​ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಷಫಿ ಅಹ್ಮದ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಯುವ ಮುಖಂಡ ಇಕ್ಬಾಲ್ ಅಹ್ಮದ್​ಗೆ ಟಿಕೆಟ್ ನೀಡಿದ ಹೈ ಕಮಾಂಡ್ ನಿರ್ಧಾರವನ್ನು ವಿರೋಧಿಸಿದ್ದಾರೆ. ಅಸಮರ್ಥ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ ಅಂತಾ ಕಿಡಿಕಾರಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಅಲ್ಪಸಂಖ್ಯಾತರ ಕಾರಣಕ್ಕೆ ಮಾಜಿ ಶಾಸಕ ಷಫಿ ಅಹ್ಮದ್ ಅವರ ಕುಟುಂಬಕ್ಕೆ ಮಣೆ ಹಾಕಲಾಗಿತ್ತು. ಷಫಿ ಎರಡು ಬಾರಿ ಹಾಗೂ ಅವರ ಅಳಿಯ ರಫಿಕ್ ಅಹ್ಮದ್ ಒಂದು ಬಾರಿ ಶಾಸಕರಾಗಿದ್ದರು. ಇದೀಗ ಮೊದಲ ಬಾರಿ ಷಫಿ ಕುಟುಂಬದ ಹೊರಗಿನ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಷಫಿ ಅಹ್ಮದ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದು ದೀರ್ಘಕಾಲದ ಕಾಂಗ್ರೆಸ್ ನಂಟು ಕಳಚಿಕೊಂಡಿದ್ದಾರೆ.

suddiyaana