ಜುಲೈ 1 ರಿಂದ ಅಮರನಾಥ ಯಾತ್ರೆ ಆರಂಭ – ಏಪ್ರಿಲ್ 17 ರಿಂದ ನೊಂದಣಿಗೆ ಅವಕಾಶ

ಜುಲೈ 1 ರಿಂದ ಅಮರನಾಥ ಯಾತ್ರೆ ಆರಂಭ – ಏಪ್ರಿಲ್ 17 ರಿಂದ ನೊಂದಣಿಗೆ ಅವಕಾಶ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿರುವ ಅಮರನಾಥ ಪವಿತ್ರ ದೇಗುಲಕ್ಕೆ ವಾರ್ಷಿಕ ಯಾತ್ರೆ ಜುಲೈ 1 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 31 ಕ್ಕೆ ಮುಕ್ತಾಯಗೊಳ್ಳಲಿದೆ ಅಂತಾ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಪ್ಪನಾಡು ದುರ್ಗೆಗೆ ಒಂದೂವರೆ ಲಕ್ಷ ಮಲ್ಲಿಗೆ ಚೆಂಡು ಅರ್ಪಣೆ

62 ದಿನಗಳ ಕಾಲ ನಡೆಯಲಿರುವ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಸಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಲು ಏಪ್ರಿಲ್ 17 ರಿಂದ ಅವಕಾಶ ನೀಡಲಾಗಿದೆ. ತೀರ್ಥಯಾತ್ರೆ ಪ್ರಾರಂಭವಾಗುವ ಮೊದಲು ಟೆಲಿಕಾಂ ಸೇವೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ ಅಂತಾ ಸಿನ್ಹಾ ತಿಳಿಸಿದ್ದಾರೆ.

ಯಾತ್ರೆಯು ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಟ್ರ್ಯಾಕ್ ಮತ್ತು ಗಂದರ್ಬಾಲ್ ಜಿಲ್ಲೆಯ ಬಾಲ್ಟಾಲ್ ಎರಡೂ ಮಾರ್ಗಗಳಿಂದ ಏಕಕಾಲದಲ್ಲಿ ಪ್ರಾರಂಭವಾಗಲಿದೆ . ಯಾವುದೇ ತೊಂದರೆ ಇಲ್ಲದೆ ಯಾತ್ರೆಯು ನಡೆಯುವುದು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಪ್ರಮುಖ ಆದ್ಯತೆಯಾಗಿದೆ. ಆಡಳಿತವು ಎಲ್ಲಾ ಭೇಟಿ ನೀಡುವ ಭಕ್ತರಿಗೆ ಉತ್ತಮ ಗುಣಮಟ್ಟದ ಆರೋಗ್ಯಸೇವೆ ಮತ್ತು ಇತರ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತದೆ ಎಂದು ಸಿನ್ಹಾ ಹೇಳಿದ್ದಾರೆ.

suddiyaana