ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರು Vs ಚೆನ್ನೈ ಪಂದ್ಯ – ಎಲ್ಲೆಲ್ಲಿ ವಾಹನ ನಿಲುಗಡೆ ನಿಷೇಧ?

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರು Vs ಚೆನ್ನೈ ಪಂದ್ಯ – ಎಲ್ಲೆಲ್ಲಿ ವಾಹನ ನಿಲುಗಡೆ ನಿಷೇಧ?

ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ಬಡಿಸುತ್ತಿರುವ ಐಪಿಎಲ್​ನಲ್ಲಿಂದು ಬೆಂಗಳೂರು ಹಾಗೂ ಚೆನ್ನೈ ತಂಡಗಳು ಮುಖಾಮುಖಿಯಾಗಲಿವೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಇತಿಹಾಸದಲ್ಲಿಯೇ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ನಡುವಣ ಪಂದ್ಯ ಸಾಕಷ್ಟು ವಿಶೇಷತೆಯನ್ನು ಹೊಂದಿದೆ. ತಂಡಗಳ ನಡುವಣ ಕಾದಾಟವಷ್ಟೇ ಅಲ್ಲದೆ, ಈ ಎರಡೂ ತಂಡಗಳ ಅಭಿಮಾನಿಗಳ ನಡುವೆ ಕೂಡ ಸಾಕಷ್ಟು ಜಿದ್ದಾಜಿದ್ದಿ ಇರುತ್ತದೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇಂದು ಬೆಂಗಳೂರು ಮತ್ತು ಚೆನ್ನೈ ನಡುವೆ ಐಪಿಎಲ್​ ಪಂದ್ಯ ನಡೆಯಲಿದೆ. ಮೊನ್ನೆಯೇ ಟಿಕೆಟ್​ಗಳು ಸೋಲ್ಡ್ ಔಟ್ ಆಗಿದ್ದು ನಿನ್ನೆ ಟಿಕೆಟ್​ಗೆಂದು ಅಭಿಮಾನಿಗಳ ದಂಡೇ ನೆರೆದಿತ್ತು. ಜನದಟ್ಟಣೆ ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ಕೂಡ ಮಾಡಿದ್ದರು. ಬಾರೀ ಕುತೂಹಲ ಮೂಡಿಸಿರುವ ಬೆಂಗಳೂರು-ಚೆನ್ನೈ ನಡುವಿನ ಪಂದ್ಯಕ್ಕೆ ಕೌಂಟ್​ಡೌನ್ ಶುರುವಾಗಿದೆ. ಪಂದ್ಯದ ದಿನ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಡೆಯಲು ಬೆಂಗಳೂರು ನಗರ ಸಂಚಾರ ಪೊಲೀಸರು ವಾಹನಗಳ ಸಂಚಾರಕ್ಕಾಗಿ ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ. ಇದರಿಂದಾಗಿ ಬೆಂಗಳೂರಿನ ಕೆಲ ಮಾರ್ಗಗಳು ಬಲದಾಗಲಿದ್ದು, ವಾಹನ ಸವಾರರು ಬದಲಿ ಮಾರ್ಗವನ್ನ ಬಳಸಬೇಕಾಗುತ್ತದೆ.

ಯಾವ್ಯಾವ ರಸ್ತೆಗಳಲ್ಲಿ ವಾಹನ ನಿಲುಗಡೆ?

ಐಪಿಎಲ್ ಪಂದ್ಯದ ಹಿನ್ನೆಲೆ ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಾಹನಗಳನ್ನು ನಿಲ್ಲಿಸುವುದನ್ನು ನಿಷೇಧಿಸಲಾಗಿದೆ. ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ರಾಜಭವನ ರಸ್ತೆ, ಕಸ್ತೂರ್ಬಾ ರಸ್ತೆ, ಅಂಬೇಡ್ಕರ್ ವೀಧಿ ರಸ್ತೆ, ಟ್ರಿನಿಟಿ ಜೆಎನ್, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರೋಡ್ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಎಲ್ಲೆಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ?

ಇನ್ನು ಎಲ್ಲೆಲ್ಲಿ  ವಾಹನಗಳನ್ನು ಪಾರ್ಕಿಂಗ್​ ಮಾಡಬೇಕು ಎಂಬುದರ ಬಗ್ಗೆಯೂ ಪರ್ಯಾಯ ರಸ್ತೆಗಳನ್ನ ಸೂಚಿಸಲಾಗಿದೆ. ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಕಿಂಗ್ಸ್ ರಸ್ತೆ, ಬಿಆರ್​ಬಿ ಮೈದಾನ, ಕಂಠೀರವ ಕ್ರೀಡಾಂಗಣ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ, ಓಲ್ಡ್​ ಕೆಜಿಯಡಿ ಬಿಲ್ಡಿಂಗ್ ಸಮೀಪ ವಾಹನಗಳನ್ನು ಪಾರ್ಕಿಂಗ್ ಮಾಡಲು ಅವಕಾಶ ನೀಡಲಾಗಿದೆ.

ಎಲ್ಲೆಲ್ಲಿ ಸಂಚಾರ ಮಾರ್ಪಾಡು?

ಯಾವುದೇ ಮಾದರಿ ಗೂಡ್ಸ್ ವಾಹನಗಳು ಕ್ವಿನ್ಸ್ ರಸ್ತೆಯಲ್ಲಿ ಸಂಚರಿಸುವಂತಿಲ್ಲ. ಸಿದ್ದಲಿಂಗಯ್ಯ ಸರ್ಕಲ್​ ಕಡೆಯಿಂದ ಎಂ.ಜಿ ರಸ್ತೆಗೆ ಹೋಗುವ ಗೂಡ್ಸ್​ ವಾಹನಗಳು ರೆಸಿಡೆನ್ಸಿ ರಸ್ತೆ ಮೂಲಕ ಹೋಗಬೇಕು. ಅದೇ ರೀತಿ ಸಿದ್ದಲಿಂಗಯ್ಯ ಸರ್ಕಲ್​ ಕಡೆಯಿಂದ ಎಂ.ಜಿ ರಸ್ತೆಗೆ ಹೋಗುವ KSRTC ಹಾಗೂ ಖಾಸಗಿ ಬಸ್ಸುಗಳೂ ಸಹ ರೆಸಿಡೆನ್ಸಿ ರಸ್ತೆ ಮೂಲಕ ಹೋಗಬೇಕು.

ಈಗಾಗಲೇ ಆರ್​ಸಿಬಿ 4 ಪಂದ್ಯಗಳಲ್ಲಿ 2ರಲ್ಲಿ ಸೋತು 2ರಲ್ಲಿ ಗೆದ್ದು ಐಪಿಎಲ್​ 2023 ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಅದೇ ರೀತಿ ಚೆನ್ನೈ ತಂಡ ಸಹ 4 ಪಂದ್ಯಗಳಲ್ಲಿ 2ರಲ್ಲಿ ಸೋತು 2ರಲ್ಲಿ ಗೆದ್ದು ರನ್​ ರೇಟ್​ ಆಧಾರದ ಮೇಲೆ 6ನೇ ಸ್ಥಾನದಲ್ಲಿದೆ.

suddiyaana