ಕೊಡಗಿನಲ್ಲಿ ಮದುವೆ ಸಮಾರಂಭಗಳಲ್ಲಿ ಓಪನ್ ಬಾರ್‌ಗೆ ಚುನಾವಣಾ ಆಯೋಗ ಗ್ರೀನ್ ಸಿಗ್ನಲ್

ಕೊಡಗಿನಲ್ಲಿ ಮದುವೆ ಸಮಾರಂಭಗಳಲ್ಲಿ ಓಪನ್ ಬಾರ್‌ಗೆ ಚುನಾವಣಾ ಆಯೋಗ ಗ್ರೀನ್ ಸಿಗ್ನಲ್

ಮಡಿಕೇರಿ: ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆ ಜನರು ಕಾರ್ಯಕ್ರಮಗಳಲ್ಲಿ ಮದ್ಯದ ವ್ಯವಸ್ಥೆ ಮಾಡಬಾರದು ಅಂತಾ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಹೀಗಾಗಿ ಕೊಡಗಿನ ಜನರು ಮದ್ಯದ ವ್ಯವಸ್ಥೆ ಮಾಡಲು ಅವಕಾಶ ಕಲ್ಪಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದೀಗ ಮದ್ಯ ನಿಷೇಧ ನಿರ್ಬಂಧ ಸಡಿಲಿಸಿ ಖಾಸಗಿ ಸಮಾರಂಭಗಳಲ್ಲಿ ಮದ್ಯದ ವ್ಯವಸ್ಥೆ ಮಾಡಲು ಅವಕಾಶ ನೀಡುವಂತೆ ರಾಜ್ಯದ ಎಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಜಗದೀಶ್‌ ಶೆಟ್ಟರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಗೆ ಸೇರ್ಪಡೆ

ಕೊಡಗಿನಲ್ಲಿ ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡಲು ನಿರ್ಬಂಧ ಹೇರಿದ್ದ ಬಗ್ಗೆ ಚುನಾವಣಾಧಿಕಾರಿಗಳಿಗೆ ಕೊಡವ ಸಮಾಜ, ಗೌಡ ಸಮಾಜ ಸೇರಿದಂತೆ ವಿವಿಧ ಸಮಾಜಗಳಿಂದ ದೂರು ಸಲ್ಲಿಸಲಾಗಿತ್ತು. ಸಮಾರಂಭಗಳಲ್ಲಿ ಮದ್ಯದ ಬಳಕೆಗೆ ಅವಕಾಶ ನೀಡಬೇಕು ಅಂತಾ ಮನವಿ ಮಾಡಿದ್ದರು. ಹೀಗಾಗಿ ಚುನಾವಣಾ ಅಧಿಕಾರಿಗಳು ನಿರ್ಬಂಧ ಸಡಿಲಿಸಿ ಆದೇಶ ಹೊರಡಿಸಿದ್ದಾರೆ.

ಕೊಡಗಿನಲ್ಲಿ ಖಾಸಗಿ ಸಮಾರಂಭಗಳಲ್ಲಿ ಮದ್ಯ ಬಳಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ರಾಜಕೀಯ ಪಕ್ಷಗಳಿಂದ ಅಥವಾ ರಾಜಕಾರಣಿಗಳಿಂದ ನಡೆಯುವ ಸಭೆ ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡಬಾರದು. ಉಳಿದಂತೆ ಚುನಾವಣಾ ನೀತಿ ಸಂಹಿತೆಗೆ ಅನುಗುಣವಾಗಿ ಎಂದಿನಂತೆ ಮದ್ಯ ಸರಬರಾಜಿಗೆ ಅನುಮತಿ ನೀಡಬಹುದು ಎಂದು ಚುನಾವಣಾ ಅಯೋಗವು ಆದೇಶ ಹೊರಡಿಸಿದೆ.

ಕೊಡಗಿನಲ್ಲಿ ಪ್ರತೀ ಮದುವೆ ಸಮಾರಂಭಗಳಲ್ಲಿ ಮದ್ಯ ಸೇವಿಸುವುದು ಅವರ ಸಂಸ್ಕೃತಿಯ ಒಂದು ಭಾಗ. ಪ್ರಸ್ತುತ ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗಿರುವುದರಿಂದ ಸಮಾರಂಭಗಳಲ್ಲಿ ಮದ್ಯದ ವ್ಯವಸ್ಥೆ ಮಾಡಬಾರದು ಎಂದು ಚುನಾವಣಾ ಆಯೋಗವು ಆದೇಶ ಹೊರಡಿಸಿತ್ತು. ಈಗ ಈ ಆದೇಶವನ್ನು ಹಿಂಪಡೆಯುವ ಮೂಲಕ ಕೊಡಗಿನ ಜನರಿಗೆ ಸಿಹಿ ಸುದ್ದಿ ನೀಡಿದ್ದಾರೆ.

suddiyaana