ಅಯ್ಯಪ್ಪ ಭಕ್ತರಿಗೆ ಗುಡ್ ನ್ಯೂಸ್ – ಶಬರಿಮಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಗ್ರೀನ್ ಸಿಗ್ನಲ್
ಅಯ್ಯಪ್ಪ ಭಕ್ತರಿಗೆ ಮೋದಿ ಸರ್ಕಾರ ಗುಡ್ನ್ಯೂಸ್ ನೀಡಿದೆ. ಕೇರಳದ ಶಬರಿಮಲೆ ದೇಗುಲಕ್ಕೆ ಸಮೀಪವಿರುವ ಕೊಟ್ಟಾಯಂ ಜಿಲ್ಲೆಯಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ವಿಮಾನಯಾನ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ. ಈ ಯೋಜನೆಯಿಂದ ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಸಾಕಷ್ಟು ನೆರವಾಗಲಿದೆ.
ಇದನ್ನೂ ಓದಿ: ಮಕ್ಕಳಿಗೆ ರಜೆ ಎಂದು ಪ್ರಚಾರಕ್ಕೆ ಕರೆಯಬೇಡಿ..! – ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾದ ಚುನಾವಣಾಧಿಕಾರಿಗಳು..!
ಕೇಂದ್ರ ವಿಮಾನಯಾನ ಸಚಿವಾಲಯ ಮತ್ತು ಯೋಜನಾ ಪ್ರಾಧಿಕಾರ, ಕೇರಳ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ ನಡುವಿನ ಬಹು ಸುತ್ತಿನ ಚರ್ಚೆಗಳ ನಂತರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಯೋಜನೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದ್ದು, ಈ ವಿಮಾನ ನಿಲ್ದಾಣವು ಬೇರೆ ಬೇರೆ ರಾಜ್ಯಗಳಿಗೆ ಹೆಚ್ಚಿನ ಸಂಪರ್ಕವನ್ನು ಸಾಧಿಸುತ್ತದೆ ಮತ್ತು ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಅಂತಾ ಸಚಿವಾಲಯ ಹೇಳಿದೆ.
ಏರ್ಪೋರ್ಟ್ಗಾಗಿ 2,250 ಎಕರೆ ಭೂಮಿಯನ್ನ ಗುರುತಿಸಲಾಗಿದ್ದು, 4 ಸಾವಿರ ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಳ್ಳಲಿದೆ ಎಂದು ಕೇಂದ್ರ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ.
ಶಬರಿಮಲೆಯಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣ ಕುರಿತು ಈಗಾಗಲೇ ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ. ಈ ಟ್ವೀಟ್ ಅನ್ನು ಪ್ರಧಾನಿ ಮೋದಿ ರೀ ಟ್ವೀಟ್ ಮಾಡಿದ್ದು, ಇದು ಅಯ್ಯಪ್ಪ ಭಕ್ತರಿಗೆ ಹಾಗೂ ಪ್ರವಾಸೋದ್ಯಕ್ಕೆ ಗುಡ್ ನ್ಯೂಸ್ ಅಂತಾ ಹೇಳಿದ್ದಾರೆ.