ಸೆಕೆಂಡ್ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಫಸ್ಟ್.. ಯಾದಗಿರಿ ಲಾಸ್ಟ್ – ರ್ಯಾಂಕ್ ಬಂದವರ ಬಗ್ಗೆ ಇಲ್ಲಿದೆ ಮಾಹಿತಿ
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. karresults.nic.in ನಲ್ಲಿ ಫಲಿತಾಂಶ ನೋಡಬಹುದು. ಈ ಬಾರಿಯೂ ಕೂಡ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೊಷ್ಠಿ ನಡೆಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಅಧ್ಯಕ್ಷ ರಾಮಚಂದ್ರ, ಕರ್ನಾಟಕ ಶಾಲಾ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್ ಭಾಗಿಯಾಗಿದ್ದರು. ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಫಸ್ಟ್ ಇದ್ರೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ಇದನ್ನೂ ಓದಿ : ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಭಾರತದಿಂದಲೇ ಪರೀಕ್ಷೆ ಬರೆಯಲು ಅವಕಾಶ
ಅದರಂತೆ ನೀವು www.karresults.nic.in ಗೆ ಭೇಟಿ ನೀಡುವ ಮೂಲಕ ನೀವು ನಿಮ್ಮ ಫಲಿತಾಂಶವನ್ನು ಚೆಕ್ ಮಾಡಬಹುದು. ಅಥವಾ https://kseab.karnataka.gov.in/ಗೆ ಭೇಟಿ ನೀಡುವ ಮೂಲಕ ಚೆಕ್ ಮಾಡಬಹುದು. ಈ ಕೂಡಲೇ ನಿಮ್ಮ ಫಲಿತಾಂಶ ಚೆಕ್ ಮಾಡಿ.
ದ್ವಿತೀಯ ಪಿಯುಸಿಯಲ್ಲಿ ಯಾವ್ಯಾವ ವಿಭಾಗದಲ್ಲಿ ಯಾಱರು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ ಅನ್ನೋ ಬಗ್ಗೆ ಮಾಹಿತಿ ಇಲ್ಲಿದೆ.
ಕಲಾ ವಿಭಾಗ
ತಬಸುಂ ಶೇಕ್
ಅಂಕ : 593
ವಾಣಿಜ್ಯ ವಿಭಾಗ
ಅನನ್ಯ ಕೆ.ಎ
ಅಂಕ: 600 ಕ್ಕೆ 600
ವಿಜ್ಞಾನ ವಿಭಾಗ
ಎಸ್.ಎಂ.ಕೌಶಿಕ್ ಅಂಕ :596
ಸುರಭಿ ಅಂಕ :596